ಸುಲ್ಕೆರಿ ಮೊಗ್ರು ಗ್ರಾಮ ಪಂಚಾಯತ್ ಗ್ರಾಮ ಸಭೆ

0

ಸುಲ್ಕೇರಿ : ಸುಲ್ಕೆರಿ ಗ್ರಾಮ ಪಂಚಾಯತ್‌ದ ಗ್ರಾಮ ಸಭೆಯು ಪಂಚಾಯತದ ಅಧ್ಯಕ್ಷ ನಾರಾಯಣ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಅ. ೬ ರಂದು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಅಕ್ಷರದಾಸೋಹ ಯೋಜನೆಯ ಸಹಾಯಕ ನಿರ್ದೇಶಕರಾದ ಶ್ರೀಮತಿ ತಾರಾಕೇಸರಿ ಮಾರ್ಗದರ್ಶಕ ಅಧಿಕಾರಿಯಾಗಿ ಭಾಗವಹಿಸಿದ್ದರು. ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ಯಶೋಧರ ಬಂಗೇರ, ಗ್ರಾ.ಪಂ. ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು, ಪಂಚಾಯತ್ ಸಿಬ್ಬಂದಿಗಳು ಹಾಗೂ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತಾಡಿದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ. ಪಿ ಅವರು ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ೨೦೨೨- ೨೩ ಸಾಲಿನ ಅಭಿವೃದ್ಧಿ ದೃಷ್ಟಿಯಿಂದ ಸುಲ್ಕೆರಿ ಗ್ರಾಮದ ೪೪೯ ಮನೆಗಳಿಗೆ ಸುಸಜ್ಜಿತವಾಗಿ ಕುಡಿಯುವ ನೀರು ಒದಗಿಸುವ ಬಗ್ಗೆ ಹಾಗೂ ಗ್ರಾಮದ ವಿವಿಧ ಕಾಮಗಾರಿಗಳನ್ನು ಗ್ರಾಮಸ್ಥರ ಬೇಡಿಕೆಗಳನ್ನು ಈಡೇರಿಸು ಬಗ್ಗೆ ತಿಳಿಸಿದರು. ಗ್ರಾಮ ಪಂಚಾಯತ್‌ದ ಕಾರ್ಯದರ್ಶಿ ಕೊರಗಪ್ಪ ನಾಯ್ಕ್ ಅವರು ೨೦೨೨-೨೩ ನೇ ಸಾಲಿನ ವರದಿ ವಾಚಿಸಿದರು. ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ತಮ್ಮ ಇಲಾಖೆಯಿಂದ ಜನರಿಗೆ ಸಿಗುವ ಸೌಲಭ್ಯಗಳ ಕುರಿತು ಮಾಹಿತಿಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಗ್ರಾಮದ ಹಲವು ಬೇಡಿಕೆಗಳನ್ನು ಸಭೆಯ ಮುಂದಿಟ್ಟರು. ಸುಲ್ಕೆರಿ ಗ್ರಾಮದ ನಾವರ ಗುಡ್ಡ ರಸ್ತೆ ಸಂಪರ್ಕ ಸರಿಪಡಿಸುವ ಬಗ್ಗೆ, ಸುಲ್ಕೆರಿಯಲ್ಲಿ ಸಹಕಾರಿ ಬ್ಯಾಂಕ್ ಆರಂಭಿಸುವ ಬಗ್ಗೆ, ಗ್ರಾ.ಪಂ ವ್ಯಾಪ್ತಿಯ ರಸ್ತೆ ಬದಿ ಚರಂಡಿ ಸ್ವಚ್ಛತೆ ಬಗ್ಗೆ, ಅಳದಂಗಡಿಯಿಂದ ಸುಲ್ಕೇರಿಯವರೆಗೆ ದ್ವಿಪಥ ರಸ್ತೆ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಬೇಡಿಕೆ ಸಲ್ಲಿಸಿದರು. ಅಲ್ಲದೆ ಕಾಡು ಪ್ರಾಣಿಗಳಿದ ತಾವು ಬೆಳೆಯುತ್ತಿರುವ ಬೆಳೆಗಳಿಗೆ ಹಾನಿಯಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಒತ್ತಾಹಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ನಾರಾಯಣ ಪೂಜಾರಿ ಅವರು ಗ್ರಾಮ ಸಭೆಯನ್ನು ಉದ್ದೇಶಿಸಿ ಮಾತಾಡಿ ಗ್ರಾಮ ಸಭೆಯ ಉದ್ದೇಶ ಹಾಗೂ ಮಹತ್ವದ ಬಗ್ಗೆ ಹೇಳಿದರು. ಗ್ರಾಮದ ವಿವಿಧ ಅಭಿರುದ್ಧಿ ಕಾರ್ಯಗಳ ಬಗ್ಗೆ ಗ್ರಾಮ ಸಭೆಯಲ್ಲಿ ಚರ್ಚಿಸಲಾಯಿತು. ಪಂಚಾಯತ್ ಕಾರ್ಯದರ್ಶಿ ಕೊರಗಪ್ಪ ನಾಯ್ಕ್ ವಂದನಾರ್ಪಣೆಗೈದರು.

LEAVE A REPLY

Please enter your comment!
Please enter your name here