ಬೆಳ್ತಂಗಡಿ: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಅವರ ಬೆಂಗಳೂರು ನಿವಾಸದಲ್ಲಿ ಅ.12ರಂದು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಬಳಿಕ ಕ್ಷೇತ್ರದ ಪರವಾಗಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಡಿ ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.