ನಾವೂರು ಅಂಗನವಾಡಿಯಲ್ಲಿ ಹೆಣ್ಣು ಶಿಶು ಪ್ರದರ್ಶನ ಕಾರ್ಯಕ್ರಮ

0

ನಾವೂರು:  ಅಂಗನವಾಡಿ ಕೇಂದ್ರ ನಾವೂರು ಇಲ್ಲಿ ನಾವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿಗಳಿಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ, ಗ್ರಾಮ ಪಂಚಾಯತ್ ನಾವೂರು ಸಹಾಭಾಗಿತ್ವದಲ್ಲಿ ಹೆಣ್ಣು ಶಿಶು ಪ್ರದರ್ಶನ ಕಾರ್ಯಕ್ರಮ ನಡೆಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಗೌಡ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ. ವೆಂಕಟ ಕೃಷ್ಣ ರಾಜ ಮಹಾತ್ಮಾ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಕಾತರಿ ಯೋಜನೆಯಡಿ ಪೌಷ್ಟಿಕ ತೋಟ ಹಾಗೂ ಇನ್ನಿತರ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ಸದ್ರಿ ಕಾರ್ಯಕ್ರಮದಲ್ಲಿ ಇಲಾಖೆಯ ಮೇಲ್ವಿಚಾರಕಿ  ನಾಗವೇಣಿ, ಕಿರಿಯ ಆರೋಗ್ಯ ಸಹಾಯಕಿ ಪುಷ್ಪ ಮಾಹಿತಿ ನೀಡಿದರು. ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶೋಭ, ಅಂಗನವಾಡಿ ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು ಮಕ್ಕಳ ತಾಯಂದಿರು ,ವಿ, ಆರ್, ಡಬ್ಲ್ಯೂ. ಷರೀಫ್, ಗ್ರಾಮಸ್ಥರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here