ಶಾಸಕ ಹರೀಶ್ ಪೂಂಜರಿಗೆ ಬೆದರಿಕೆ ನೀಡಿದ ಪ್ರಕರಣ: ತನಿಖೆ ಸಿಐಡಿಗೆ ವರ್ಗಾವಣೆ

0

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರು ಚಲಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಐಡಿ ಗೆ ವರ್ಗಾಯಿಸಲಾಗಿದೆ. ಪ್ರಕರಣದ ಕಡತಗಳನ್ನು ಬಂಟ್ವಾಳ ಪೊಲೀಸರು ಸಿಐಡಿ ವಿಭಾಗಕ್ಕೆ ವರ್ಗಾವಣೆ ಮಾಡಿದ್ದಾರೆ.

ಗುರುವಾರ ರಾತ್ರಿ ಸುಮಾರು 11.15ಕ್ಕೆ ಘಟನೆ ನಡೆದಿದ್ದು, ಹರೀಶ್ ಪೂಂಜರವರ ಚಾಲಕನ ದೂರಿನಂತೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಘಟನೆ ನಡೆದಿದರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕೂಡಲೇ ಕಾರ್ಯಾಚರನೆಗಿಳಿದ ಪೊಲೀಸರು ಆರೋಪಿ ಫಳ್ನೀರ್ ನಿವಾಸಿ ರಿಯಾಜ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ರಾಜ್ಯ ಸರ್ಕಾರ ಸಿಐಡಿ ಗೆ ಹಸ್ತಾಂತರಿಸಿದ್ದು ತನಿಖೆ ಆರಂಭಗೊಂಡಿದೆ.

LEAVE A REPLY

Please enter your comment!
Please enter your name here