ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ರೋಸಾ ಜೋಯ್ ಫೂಟ್ ಬಾಲ್ ಪಂದ್ಯಾಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0


ಉಜಿರೆ:  ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ವತಿಯಿಂದ ಶಿವಮೊಗ್ಗದಲ್ಲಿ ಜರುಗಿದ ರಾಜ್ಯ ಮಟ್ಟದ ‘ ಫೂಟ್ ಬಾಲ್’ 14 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಮೈಸೂರು ವಿಭಾಗವು ದ್ವಿತೀಯ ಸ್ಥಾನವನ್ನು ಗಳಿಸಿರುತ್ತದೆ. ರಾಜ್ಯ ಮಟ್ಟದ ಈ ಪಂದ್ಯಾಟದಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಉಜಿರೆ ಇಲ್ಲಿಯ ರೋಸಾ ಜೋಯ್ , ಅನ್ಸಿಕಾ ಮತ್ತು ಶ್ರಾವಣ್ಯ ಇವರು ಭಾಗವಹಿಸಿದ್ದು, ರೋಸಾ ಜೋಯ್ ಇವರು ಡಿಸೆಂಬರ್ ತಿಂಗಳಲ್ಲಿ ಜರುಗುವ ರಾಷ್ಟ್ರ ಮಟ್ಟದ ಫೂಟ್ ಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರನ್ನು ಶಾಲಾ ಸಂಚಾಲಕರು , ಪ್ರಾಂಶುಪಾಲರು , ಶಾಲಾ ಆಡಳಿತ ಮಂಡಳಿ ಸದಸ್ಯರು , ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here