ಅ.23 ರಂದು ಕೊಯ್ಯೂರಿನ ಮಲೆಕುಡಿಯರ ಸಮುದಾಯಭವನದಲ್ಲಿ ಭೂ ಮಸೂದೆಗಳ ಮಾಹಿತಿ ಕಾರ್ಯಾಗಾರ

0

ಕೊಯ್ಯೂರು: ಇದೇ ಬರುವ ಅ. 23ರಂದು  ಬೆಳ್ತಂಗಡಿಯ ಕೊಯ್ಯೂರು ಶಿವಗಿರಿಯಲ್ಲಿರುವ ಮಲೆಕುಡಿಯರ ಸಮುದಾಯಭವನದಲ್ಲಿ ಬೆಳಗ್ಗೆ 9.30ಕ್ಕೆ ಮಲೆಕುಡಿಯರ ಸಂಘ (ರಿ.) ದ.ಕ. ಜಿಲ್ಲಾ ಸಮಿತಿ ಇದರ ನೇತೃತ್ವದಲ್ಲಿ ಭೂ ಮಸೂದೆ ಕಾನೂನುಗಳ ಮಾಹಿತಿ ಕಾರ್ಯಗಾರ ನಡೆಯಲಿದೆ.

ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ರಾಜ್ಯ ಒಕ್ಕೂಟ, ರಾಜ್ಯ ಮಲೆಕುಡಿಯರ ಸಂಘ ಮತ್ತು ಕೊರಗ ಅಭಿವೃದ್ಧಿ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ.

ಉಡುಪಿಯ ಸಮಗ್ರ ಗ್ರಾಮೀಣ ಆಶ್ರಮದ ಅಧ್ಯಕ್ಷ ಅಶೋಕ್ ಶೆಟ್ಟಿಯವರು ಮಾಹಿತಿ ನೀಡಲಿದ್ದಾರೆ. ಮಲೆಕುಡಿಯರ ಸಂಘ (ರಿ.) ದ.ಕ. ಜಿಲ್ಲಾ ಸಮಿತಿಯ ಅಧ್ಯಕ್ಷ ಹರೀಶ್ ಎಳನೀರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜ, ರಾಜ್ಯ ಮಲೆಕುಡಿಯರ ಸಂಘದ ಅಧ್ಯಕ್ಷ ಶ್ರೀಧರ ಗೌಡ ಈದು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ದ.ಕ. ಜಿಲ್ಲೆ ಕರ್ನಾಟಕ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟದ ಸಂಚಾಲಕ ಬಾಲಕೃಷ್ಣ ಕೆ ಪೊಳಲಿ ಹಾಗೂ ಸಂಜೀವ, ಕೊರಗ ಅಭಿವೃದ್ಧಿ ಸಂಘ, ಪುತ್ತೂರು ಇದರ ಪ್ರಧಾನ ಕಾರ್ಯದರ್ಶಿ ಕಮಲ ಉಪಸ್ಥಿತಿ ಇರಲಿದ್ದಾರೆ.

ಈ ಮಾಹಿತಿ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯ ಮಲೆಕುಡಿಯ ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಾಹಿತಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ಮಲೆಕುಡಿಯರ ಸಂಘ (ರಿ.) ದ.ಕ. ಜಿಲ್ಲಾ ಸಮಿತಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here