ಶಿಶಿಲ ಗ್ರಾ.ಪಂ 2022-23ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ

0

ಶಿಶಿಲ: ಶಿಶಿಲ ಗ್ರಾ.ಪಂ 2022-23ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾ.ಪಂ ಸಭಾಭವನದಲ್ಲಿ ಅ.20 ರಂದು ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷ ಸಂದೀಪ್ ಎ ಯಸ್ ವಹಿಸಿದ್ದರು.

ವಾರ್ಡ್ ಸಭೆಗಳಲ್ಲಿ ಬಂದ ಪ್ರಸ್ತಾವನೆಗಳ ಕುರಿತು, ವಿವಿಧ ಇಲಾಖಾಧಿಕಾರಿಗಳಿಂದ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಸರಕಾರದ ವಿವಿಧ ಯೋಜನೆಗಳ ಬಗ್ಗೆ ಅರ್ಜಿಗಳನ್ನು ಸ್ವೀಕರಿಸಲಾಯಿತು ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ  ಕೊಕ್ಕಡ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಚಿದಾನಂದ ಯಸ್ ಹೂಗಾರ್, ಗ್ರಾ.ಪಂ ಉಪಾಧ್ಯಕ್ಷೆ ವಿಮಲ,  ತಾಲೂಕು ಮಟ್ಟದ ಅಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು, ಗ್ರಾ.ಪಂ ಸರ್ವಸದಸ್ಯರು  ಹಾಗೂ ಸಿಬ್ಬಂದಿ ವರ್ಗ ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂ ಅಭಿವೃದ್ಧಿ ಅಧಿಕಾರಿ ಸ್ಮೃತಿ ಯು ಸ್ವಾಗತಿಸಿ ಜಮಾ ಖರ್ಚಿನ ವಿವರವನ್ನು ಮಂಡಿಸಿದರು.

 

LEAVE A REPLY

Please enter your comment!
Please enter your name here