ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಮಂಜುನಾಥ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆ

0

ಬೆಳ್ತಂಗಡಿ: ಸಂಚಾರಿ ಪೊಲೀಸ್ ಠಾಣೆಯಲ್ಲಿದ್ದ ಕಾನ್ಸ್ಟೇಬಲ್ ಮಂಜುನಾಥ್ ಅವರನ್ನು ಬೆಳ್ತಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಿವಾಸಿಯಾಗಿರುವ ಮಂಜುನಾಥ್ ಅವರು 2016ನೇ ಬ್ಯಾಚ್ ನವರಾಗಿದ್ದು, ಧಾರವಾಡ ಪೊಲೀಸ್ ತರಬೇತಿ ಕೇಂದ್ರದಲ್ಲಿ ಪೊಲೀಸ್ ತರಬೇತಿ ಮುಗಿಸಿದ ಬಳಿಕ ಮೊದಲು ದ.ಕ ಜಿಲ್ಲಾ ಎಸ್ಪಿಯಾಗಿದ್ದ ಸುಧೀರ್ ಕುಮಾರ್ ರೆಡ್ಡಿಯವರ ವಿಶೇಷ ದಳದಲ್ಲಿ ಮೂರು ತಿಂಗಳು ಇದ್ದು ನಂತರ 2017 ಅಕ್ಟೋಬರ್ 12ರಂದು ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ವರ್ಗಾವಣೆ ಆಗಿದ್ದರು. ಕಳೆದ ಐದು ವರ್ಷಗಳಿಂದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಮಾಡಿದ್ದು ಇದೀಗ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

LEAVE A REPLY

Please enter your comment!
Please enter your name here