ಶಾಸಕ ಹರೀಶ್ ಪೂಂಜರಿಗೆ ಜೀವಬೆದರಿಕೆ ಪ್ರಕರಣ: ಸಿಐಡಿ ಅಧಿಕಾರಿಗಳಿಂದ ತನಿಖೆ ಆರಂಭ

0

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಕಾರನ್ನು ಅಡ್ಡಗಟ್ಟಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಸಿಐಡಿ ಇನ್ಸ್ಪೆಕ್ಟರ್ ಶಿವರಾಜ್ ಅವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ಆಗಮಿಸಿ ಕಡತಗಳ ಪರಿಶೀಲನೆಯ ಮೂಲಕ ತನಿಖೆ ಆರಂಭಿಸಿದ್ದಾರೆ.

ಅ.18ರಂದು ಬಂಟ್ವಾಳ ಗ್ರಾಮಾಂತರ ಪಿಎಸ್ ಐ ಹರೀಶ್ ಅವರು ಪ್ರಕರಣ ಕಡತವನ್ನು ಬೆಂಗಳೂರು ಸಿಐಡಿ ಕಚೇರಿಗೆ ಹಸ್ತಾಂತರಿಸಿದ್ದರು. ಕಡತ ಹಸ್ತಾಂತರದ ಬೆನ್ನಲ್ಲೇ ಪೊಲೀಸ್ ಇನ್ಸ್ಪೆಕ್ಟರ್ , ಪಿಎಸ್ ಐ ಹಾಗೂ ಇಬ್ಬರು ಸಿಬ್ಬಂದಿಯನ್ನು ಒಳಗೊಂಡ ತಂಡ ಬಂಟ್ವಾಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದೆ.

LEAVE A REPLY

Please enter your comment!
Please enter your name here