ಲಾಯಿಲ: ನೈಸರ್ಗಿಕ ಸಂಪನ್ಮೂಲ ನಿರ್ವಹಣೆ ಕಾಮಗಾರಿಗಳ ವೈಜ್ಞಾನಿಕ ಯೋಜನಾ ವರದಿ ತಯಾರಿ ಮತ್ತು ಅನುಷ್ಟಾನದ ಕುರಿತು ಎರಡು ದಿನಗಳ ಮುಖಾ ಮುಖಿ ತರಬೇತಿ ಕಾರ್ಯಾಗಾರ

0

ಲಾಯಿಲ: ಲಾಯಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ  ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್, ಇಲಾಖೆ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ, ಮೈಸೂರು,ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ,ಮಂಗಳೂರು ಹಾಗೂ ತಾಲೂಕು ಪಂಚಾಯತ್ ಬೆಳ್ತಂಗಡಿ ಇವುಗಳ ಜಂಟಿ ಆಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಜಲಸಂಜೀವಿನಿ ಕಾರ್ಯಕ್ರಮದಡಿ ನೈಸರ್ಗಿಕ ಸಂಪನ್ಮೂಲ ನಿರ್ವಹಣೆ ಕಾಮಗಾರಿಗಳ ವೈಜ್ಞಾನಿಕ ಯೋಜನಾ ವರದಿ ತಯಾರಿ ಮತ್ತು ಅನುಷ್ಟಾನದ ಕುರಿತು ಎರಡು ದಿನಗಳ ಮುಖಾ ಮುಖಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು.

ತರಬೇತಿ ಕಾರ್ಯಾಗಾರವನ್ನು ಲಾಯಿಲ ಗ್ರಾಮ ಪಂಚಾಯತಿಯ ಅಧ್ಯಕ್ಷರು ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ನರೇಗಾ ಪ್ರಭಾರ ಸಹಾಯಕ ನಿರ್ದೇಶಕರು ಮತ್ತು ವ್ಯವಸ್ಥಾಪಕರು,ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು, ಕೃಷಿ ಇಲಾಖೆಯ ಕೃಷಿ ಅಧಿಕಾರಿ,ಗ್ರಾಮ ಪಂಚಾಯತ್ ಅಧ್ಯಕ್ಷರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಡಾಟಾ ಎಂಟ್ರಿ ಒಪರೇಟರ್ ಗಳು ,ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕ ಅಭಿಯಂತಯು, ತೋಟಗಾರಿಕಾ ತಾಂತ್ರಿಕ ಸಹಾಯಕರು,ಆಡಳಿತ ಸಹಾಕರು,ತಾಲೂಕು ಐಇಸಿ ಸಂಯೋಜಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here