ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಮಡಂತ್ಯಾರು ಅಂತರಾಷ್ಟ್ರೀಯ ಸ್ಕೌಟ್ ಗೈಡ್ ಸಾಂಸ್ಕೃತಿಕ ಜಾಂಬೂರಿ – 2022 ಸಮಾಲೋಚನಾ ಸಭೆ

0


ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಮಡಂತ್ಯಾರು ಅಂತರಾಷ್ಟ್ರೀಯ ಸ್ಕೌಟ್ ಗೈಡ್ ಸಾಂಸ್ಕೃತಿಕ ಜಾಂಬೂರಿ – 2022 ಸಮಾಲೋಚನಾ ಸಭೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಮಂದಿರದಲ್ಲಿ ಅ.21ರಂದು ಜರುಗಿತು.

ಸಂಪನ್ಮೂಲ ವ್ಯಕ್ತಿಗಳಾದ ಮೂಡಬಿದಿರೆಯ ಆಳ್ವ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಮೋಹನ್ ಆಳ್ವ ರವರು ಮಾತನಾಡಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ಸ್ಕೌಟ್ ಗೈಡ್ಸ್ ಸಾಂಸ್ಕೃತಿಕ ಜಾಂಬೂರಿ ಮೂಡಬಿದಿರೆಯ ಕಾರ್ಯಕ್ರಮದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಿಂದ ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವ ನಿರೀಕ್ಷಿಸಲಾಗಿದೆ.ಕಾರ್ಯಕ್ರಮದ ಯಶಸ್ವಿ ಗೊಳಿಸಲು ಬೆಳ್ತಂಗಡಿ ತಾಲೂಕಿನ ಎಲ್ಲಾ ಸಂಘ- ಸಂಸ್ಥೆಗಳ ಸಹಕಾರ ಬೇಕು ಎಂದು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ವಹಿಸಿದ್ದರು.

ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಆಯುಕ್ತ ರಾದ ಪ್ರಭಾಕರ ಭಟ್,ಬೆಳ್ತಂಗಡಿ ತಾಲೂಕು ಪಂಚಾಯತ್ ಇ.ಒ.ಕುಸುಮಧರ ಬಿ,ನಗರ ಪಂಚಾಯತು ಉಪಾಧ್ಯಕ್ಷ ಜಯನಂದ ಗೌಡ, ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸತೀಶ್ಚಂದ್ರ,ಬೆಳ್ತಂಗಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣ ಅಧಿಕಾರಿ ವಿರೂಪಾಕ್ಷ ಹೆಚ್.ಎಸ್, ಬೆಳ್ತಂಗಡಿ ಭಾ.ಸ್ಕೌ.ಗೈಡ್ ಅಧ್ಯಕ್ಷರಾದ ವಿಠ್ಠಲ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಆದೇಶದಂತೆ 5 ವರ್ಷಗಳ ದೂರದೃಷ್ಠಿ ಯೋಜನೆಯ ಕ್ರಿಯಾ ಯೋಜನಾ ತಯಾರಿಯಾಗುತ್ತಿದ್ದು ಈ ಬಗ್ಗೆ ಅಧಿಕಾರಿಗಳಿಗೆ ಜನಪ್ರತಿನಿಧಿಗಳಿಗೆ ತರಬೇತಿ ನಡೆಯುತ್ತದೆ.ತಾಲೂಕಿನ ದೂರದೃಷ್ಠಿ ಯೋಜನೆಯ ತಯಾರಿಯನ್ನು  ಶಾಸಕ ಹರೀಶ್ ಪೂಂಜ ಚಾಲನೆ ನೀಡಿದರು. ಈ ಬಗ್ಗೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಮಾತನಾಡಿದರು

ಮಡಂತ್ಯಾರು ಭಾರತ ಸ್ಕೌಟ್ಸ್ ಗೈಡ್ ಸಂಸ್ಥೆ ಕಾರ್ಯದರ್ಶಿ ಎಮ್.ಶಾಂತರಾಮ ಪ್ರಭು ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಧರ್ಮೇಂದ್ರ ಕೆ.ಪ್ರಸ್ತಾವಿಕ ಮಾತುಗಳನ್ನು ಹಾಡಿದರು. ಬೆಳ್ತಂಗಡಿ ಎಸ್.ಡಿ.ಎಮ್.ಶಾಲಾ ಮಕ್ಕಳು ಪ್ರಾರ್ಥನೆ ಮಾಡಿದರು.

LEAVE A REPLY

Please enter your comment!
Please enter your name here