ದ.ಕ ಜಿಲ್ಲೆಯಲ್ಲಿ ಜಾನುವಾರು ಸಾಗಾಟಕ್ಕೆ ತಾತ್ಕಾಲಿಕ ನಿಷೇಧ ಹೇರಿದ ಜಿಲ್ಲಾಧಿಕಾರಿ

0

ಮಂಗಳೂರು: ದ.ಕ ಜಿಲ್ಲೆಯಲ್ಲಿ ಜಾನುವಾರು ಸಾಗಾಟಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ತಾತ್ಕಾಲಿಕ ನಿಷೇಧ ಹೇರಿದ್ದಾರೆ.

ಚರ್ಮಗಂಟು ರೋಗವು ದನ ಮತ್ತು ಎಮ್ಮೆಗಳಲ್ಲಿ ಕಂಡು ಬರುತ್ತಿದ್ದು, ರೋಗಗ್ರಸ್ಥ ಜಾನುವಾರುವಿನಿಂದ ಾರೋಗ್ಯವಂತ ಜಾನುವಾರುಗಳಿಗೆ ಹರಡುತ್ತಿದೆ. ದ.ಕ ಜಿಲ್ಲೆಯಲ್ಲಿ ಚರ್ಮ ಗಂಟುರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು ಈ ರೋಗದಿಂದ ಜಾನುವಾರು ಮಾಲೀಕರುಗಳಿಗೆ  ಆರ್ಥಿಕ ನಷ್ಟವುಂಟಾಗುವುದನ್ನು ಗಮನದಲ್ಲಿರಿಸಿಕೊಂಡು ಅ.20 ರಿಂದ ನವೆಂಬರ್ 30ರವರೆಗೆ ಜಿಲ್ಲೆಯೊಳಗೆ ಮತ್ತು ಹೊರ ಜಿಲ್ಲೆ ಅಥವಾ ನೆರೆ ರಾಜ್ಯದಿಂದ ಜಿಲ್ಲೆಗೆ ಜಾನುವಾರುಗಳ ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here