ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನದ ಅಭಿವೃದ್ಧಿಗೆ ರೂ.1ಕೋಟಿ ಹಾಗೂ ಅರಸಿನಮಕ್ಕಿ-ಶಿಶಿಲ ರಸ್ತೆಗೆ ರೂ.4ಕೋಟಿ ಅನುದಾನ ಒದಗಿಸುವಲ್ಲಿ ಮುತುವರ್ಜಿ ವಹಿಸಿದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ ಸಲ್ಲಿಸಿದ ಗ್ರಾಮಸ್ಥರು

0

ಶಿಶಿಲ: ಪ್ರವಾಸೋದ್ಯಮ ಇಲಾಖೆಯ ಮುಖಾಂತರ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅಭಿವೃದ್ಧಿಗೆ ರೂ.1ಕೋಟಿ ಹಾಗೂ ಅರಸಿನಮಕ್ಕಿ-ಶಿಶಿಲ ರಸ್ತೆಗೆ ರೂ.4ಕೋಟಿ ಅನುದಾನ ಒದಗಿಸುವಲ್ಲಿ ಮುತುವರ್ಜಿ ವಹಿಸಿದ ಶಾಸಕ ಹರೀಶ್ ಪೂಂಜರವರನ್ನು ಅ.22ರಂದು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಮೂಡೆತ್ತಾಯ ಮತ್ತು ಸದಸ್ಯರು, ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಆನಂದ ಪೂಜಾರಿ ಮತ್ತು ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷ ಸಂದೀಪ್ ಮತ್ತು ಸದಸ್ಯರು, ಸಹಕಾರಿ ಸಂಘದ ನಿರ್ದೇಶಕರುಗಳು, ವಿವಿಧ ಸಮಿತಿಗಳ  ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here