HomePage_Banner
HomePage_Banner
HomePage_Banner
HomePage_Banner

ಜೂ.2: ನೆಲ್ಯಾಡಿ ಬಿಲ್ಲವ ಗ್ರಾಮ ಸಮಿತಿ ವಾರ್ಷಿಕ ಮಹಾಸಭೆ, ಪುಸ್ತಕ ವಿತರಣೆ, ಪ್ರತಿಭಾಪುರಸ್ಕಾರ, ಸನ್ಮಾನ, ಸ್ಪರ್ಧೆಗಳು

Puttur_Advt_NewsUnder_1
Puttur_Advt_NewsUnder_1


ನೆಲ್ಯಾಡಿ: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು, ಗ್ರಾಮ ಸಮಿತಿ ನೆಲ್ಯಾಡಿ ಇದರ ವಾರ್ಷಿಕ ಮಹಾಸಭೆ, ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ ಹಾಗೂ ಸ್ಪರ್ಧೆಗಳು ಜೂ.2ರಂದು ನೆಲ್ಯಾಡಿ ಸರಕಾರಿ ಹಿ.ಪ್ರಾ.ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಗ್ರಾಮ ಸಮಿತಿ ಅಧ್ಯಕ್ಷ ಡಾ.ಸದಾನಂದ ಕುಂದರ್, ಕಾರ್ಯದರ್ಶಿ ಮೋಹನ್ ಕುಮಾರ್ ಡಿ.,ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.

ಬೆಳಿಗ್ಗೆ ಎಪಿಎಂಸಿ ಸದಸ್ಯ ಬಾಲಕೃಷ್ಣ ಬಾಣಜಾಲುರವರು ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಪೂರ್ವಾಹ್ನ ನೋಣಯ್ಯ ಪೂಜಾರಿ ಅಂಬರ್ಜೆ ಮತ್ತು ಬಳಗದವರಿಂದ ಭಜನಾ ಕಾರ್ಯಕ್ರಮ, ಗುರುಪೂಜೆ ನಡೆಯಲಿದೆ. ಮಧ್ಯಾಹ್ನ ವಾರ್ಷಿಕ ಮಹಾಸಭೆ ನಡೆಯಲಿದ್ದು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲು ಉದ್ಘಾಟಿಸಲಿದ್ದಾರೆ. ತಾ.ಪಂ.ಸದಸ್ಯೆ, ಉಪ್ಪಿನಂಗಡಿ ಮೂರ್ತೆದಾರರ ಸೇವಾ ಸಹಕಾರ ಸಂಘದ ಅಧ್ಯಕ್ಷೆ ಉಷಾ ಅಂಚನ್‌ರವರಿಗೆ ಸನ್ಮಾನ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.