ಅ.24: ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ಹೆಗ್ಗಡೆಯವರ 55ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ-ಸಡಗರ 

0

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ  ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 55ನೇ ವರ್ಧಂತ್ಯುತ್ಸವವು ಅ.24 ರಂದು ಧರ್ಮಸ್ಥಳದಲ್ಲಿ ಸಂಭ್ರಮ-ಸಡಗರದಿಂದ ನಡೆಯಲಿದೆ.

ದೇವಸ್ಥಾನ ಮತ್ತು ಬಸದಿಯಲ್ಲಿ ವಿಶೇಷ ಪೂಜೆ ನಡೆಯಲಿದ್ದು. ದೇವಳದ ನೌಕರರು, ಊರಿನ ನಾಗರಿಕರು, ಭಕ್ತರು, ವಿವಿಧ ಸಂಸ್ಥೆಗಳ ನೌಕರರು ಹಾಗೂ ಅಭಿಮಾನಿಗಳು  ಹೆಗ್ಗಡೆಯವರಿಗೆ ಶ್ರದ್ಧಾ-ಭಕ್ತಿಯಿಂದ ಗೌರವಾರ್ಪಣೆ ಮಾಡುವರು.

ಬೀಡು (ಹೆಗ್ಗಡೆಯವರ ನಿವಾಸ), ದೇವಸ್ಥಾನ, ವಸತಿ, ಛತ್ರಗಳನ್ನು ಆಕರ್ಷಕ ವಿನ್ಯಾಸಗಳಿಂದ ಆಲಂಕರಿಸಲಾಗಿದೆ. ಎಲ್ಲೆಲ್ಲೂ ಹಬ್ಬದ ವಾತಾವರಣವಿದೆ, ಸಂಜೆ ನಾಲ್ಕು ಗಂಟೆಗೆ ಮಹೋತ್ಸವ ಸಭಾಭವನದಲ್ಲಿ ಹೆಗ್ಗಡೆಯವರ ಆಭಿನಂದನಾ ಸಮಾರಂಭ ನಡೆಯುತ್ತದೆ.

ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆ ವಹಿಸುವರು. ಶಾಸಕರುಗಳಾದ ಕೆ. ಹರೀಶ್‌ ಪೂಂಜ, ಕೆ. ಪ್ರತಾಪಸಿಂಹ ನಾಯಕ್ ಮತ್ತು ಕೆ. ಹರೀಶ್ ಕುಮಾರ್‌ ಶುಭಾಶಂಸನೆ ಮಾಡುವರು. ಹಿರಿಯ ನೌಕರರ – ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳ, ಆಭಿನಂದನೆ ಹಾಗೂ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here