ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ: ಅಭಿನಂದನೆಗಳ ಮಹಾಪೂರ

0

ಉಜಿರೆ: ಧರ್ಮಸ್ಥಳದಲ್ಲಿ ಸೋಮವಾರ ಎಲ್ಲೆಲ್ಲೂ ಸಂಭ್ರಮ-ಸಡಗರ, ಹಬ್ಬದ ವಾತಾವರಣ.   ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಆಚರಣೆ ಅಂಗವಾಗಿ ಊರಿನ ನಾಗರಿಕರು, ನೌಕರರು, ಸರ್ಕಾರಿ ಅಧಿಕಾರಿಗಳು ಹಾಗೂ ಅಭಿಮಾನಿ ಭಕ್ತರು ಹೆಗ್ಗಡೆಯವರಿಗೆ ಶ್ರದ್ಧಾ-ಭಕ್ತಿಯಿಂದ ಫಲ, ಪುಷ್ಪ ಅರ್ಪಿಸಿ ಗೌರವ ಸಲ್ಲಿಸಿದರು.

ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿಭಟ್ಟಾರಕ ಸ್ವಾಮೀಜಿ ಹೆಗ್ಗಡೆಯವರಿಗೆ ಅಭಿನಂದನೆಗಳೊಂದಿಗೆ ಪ್ರಸಾದ ನೀಡಿ ಗೌರವಿಸಿದರು.  ದೇವಸ್ಥಾನ, ಬಸದಿಯಲ್ಲಿ ವಿಶೇಷ ಪೂಜೆ ನಡೆಯಿತು.

ಮೂಡಬಿದ್ರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಕನ್ಯಾಡಿ ರಾಮಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಮಾಣಿಲದ ಮೋಹನದಾಸ ಸ್ವಾಮೀಜಿ, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪಸಿಂಹ ನಾಯಕ್ ಮತ್ತು ಕೆ. ಹರೀಶ್ ಕುಮಾರ್ ಮೊದಲಾದ ಗಣ್ಯರು ಹೆಗ್ಗಡೆಯವರಿಗೆ ಗೌರವಾರ್ಪಣೆ ಮಾಡಿದರು.

 

LEAVE A REPLY

Please enter your comment!
Please enter your name here