Home_Page_Advt
Home_Page_Advt
Home_Page_Advt

ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ

Puttur_Advt_NewsUnder_1
Puttur_Advt_NewsUnder_1

ಸವಣೂರು ವಲಯದ ಒಕ್ಕಲಿಗ ಸ್ವ ಸಹಾಯ ಸಂಘ, ಗೌಡ ಸೇವಾ ಸಂಘ, ಮಹಿಳಾ ಘಟಕ, ಗ್ರಾಮ ಸಮಿತಿ ನೇತೃತ್ವದಲ್ಲಿ ಮೃತ್ಯುಂಜಯ ಹೋಮ – ಸಭಾಕಾರ್ಯಕ್ರಮ

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘದ ಪ್ರಾಯೋಜಕತ್ವದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘ, ಒಕ್ಕಲಿಗ ಗೌಡ ಮಹಿಳಾ ಸೇವಾ ಸಂಘ, ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಪುತ್ತೂರು ಇದರ ಸಹಕಾರದೊಂದಿಗೆ ಸವಣೂರು ವಲಯದ ಒಕ್ಕಲಿಗ ಸ್ವ ಸಹಾಯ ಸಂಘ, ಒಕ್ಕಲಿಗ ಗೌಡ ಸೇವಾ ಸಂಘ, ಯುವ ಒಕ್ಕಲಿಗ ಗೌಡ, ಒಕ್ಕಲಿಗ ಮಹಿಳಾ ಘಟಕದ ಗ್ರಾಮ ಸಮಿತಿ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಜೂ.೨ರಂದು ಬೆಳಿಗ್ಗೆ ೭ ರಿಂದ ನರಿಮೊಗರು ಶ್ರೀ ಮೃತ್ಯುಂಜಯೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ ನಡೆಯಿತು.

ಸಭಾಕಾರ್ಯಕ್ರಮ: ಬೆಳಿಗ್ಗೆ ೧೦ ರಿಂದ ನಡೆದ ಸಭಾ ಕಾರ್ಯಕ್ರಮವನ್ನು ಶ್ರೀಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀಧರ್ಮಪಾಲನಾಥ ಸ್ವಾಮೀಜಿಯವರು ದೀಪ ಬೆಳಗಿಸಿ ಉದ್ಘಾಟಿಸಿದರು. ಒಕ್ಕಲಿಗ ಗೌಡ ಸೇವಾ ಸಂಘದ ತಾಲೂಕು ಅಧ್ಯಕ್ಷ ಹೆಚ್.ಡಿ.ಶಿವರಾಮ ಗೌಡ ಅಧ್ಯಕ್ಷತೆ ವಹಿಸಿದರು. ಶಾಸಕ ಸಂಜೀವ ಮಠಂದೂರು, ಒಕ್ಕಲಿಗ ಗೌಡ ಸೇವಾ ಸಂಘದ ಸಲಹಾ ಸಮಿತಿ ಅಧ್ಯಕ್ಷ ಮೋಹನ್ ಗೌಡ ಇಡ್ಯಡ್ಕ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಅಧ್ಯಕ್ಷ ಎ.ವಿ.ನಾರಾಯಣ ಗೌಡ, ಒಕ್ಕಲಿಗ ಗೌಡ ಮಹಿಳಾ ಸೇವಾ ಸಂಘದ ಕಾರ್ಯದರ್ಶಿ ನೇತ್ರಾವತಿ ಕೆ.ಪಿ, ಒಕ್ಕಲಿಗ ಗೌಡ ಯುವ ಸಂಘದ ಅಧ್ಯಕ್ಷ ರಾಧಾಕೃಷ್ಣ ಗೌಡ ನಂದಿಲ, ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಚಿದಾನಂದ ಗೌಡ ಬೈಲಾಡಿ, ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಅಧ್ಯಕ್ಷ ಡಿ.ವಿ.ಮನೋಹರ ಗೌಡ, ಸಮಾಜ ಸೇವಕಿ ನಳಿನಿ ಲೋಕಪ್ಪ ಗೌಡ, ಒಕ್ಕಲಿಗ ಗೌಡ ಸೇವಾ ಸಂಘ ಸವಣೂರು ವಲಯದ ಅಧ್ಯಕ್ಷ ಗೋಪಾಲಕೃಷ್ಣ ಪಟೇಲ್, ಯುವ ಒಕ್ಕಲಿಗ ಅಧ್ಯಕ್ಷ ನಾಗೇಶ್ ಕೆಡೆಂಜಿ, ಮಹಿಳಾ ಸೇವಾ ಸಂಘದ ಅಧ್ಯಕ್ಷೆ ನಿರ್ಮಲ ಕೇಶವ ಗೌಡ ಅಮೈ, ಮೃತ್ಯುಂಜಯ ಹೋಮ ಸಮಿತಿ ಕಾರ್ಯಾಧ್ಯಕ್ಷ ಜನಾರ್ಧನ ಗೌಡ ಭಕ್ತಕೋಡಿ, ಪ್ರಧಾನ ಕಾರ್ಯದರ್ಶಿ ಹರ್ಷಗುತ್ತು, ಸಮಾರಂಭದಲ್ಲಿ ಸನ್ಮಾನಿಸಲ್ಪಡುವ ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಉಪಸ್ಥಿತರಿದ್ದರು.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.