HomePage_Banner
HomePage_Banner
HomePage_Banner
HomePage_Banner

ನೆಲ್ಯಾಡಿ: ಸಂತಜಾರ್ಜ್ ಪ್ರೌಢಶಾಲಾ ಶಿಕ್ಷಕ ಕೆ.ಸಿ.ಪೌಲೋಸ್‌ರಿಗೆ ಬೀಳ್ಕೊಡುಗೆ

Puttur_Advt_NewsUnder_1
Puttur_Advt_NewsUnder_1


ನೆಲ್ಯಾಡಿ: ಸಂತ ಜಾರ್ಜ್ ಪ್ರೌಢಶಾಲೆಯಲ್ಲಿ 29 ವರ್ಷ ಚಿತ್ರಕಲಾ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ಮೇ 31ರಂದು ನಿವೃತ್ತರಾದ ಕೆ.ಸಿ. ಪೌಲೋಸ್‌ರವರಿಗೆ ಬೀಳ್ಕೊಡುಗೆ ಸಮಾರಂಭವು ಜೂ.1ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆಯ ಸಂಚಾಲಕ ಅಬ್ರಹಾಂ ವರ್ಗೀಸ್‌ರವರು ನಿವೃತ್ತರಾದ ಕೆ.ಸಿ.ಪೌಲೋಸ್‌ರನ್ನು ಸನ್ಮಾನಿಸಿದರು. ಬಳಿಕ ಮಾತನಾಡಿದ ಅವರು, ಕೆ.ಸಿ.ಪೌಲೋಸ್‌ರವರು ಸಂಸ್ಥೆಯಲ್ಲಿ ಚಿತ್ರಕಲಾ ಶಿಕ್ಷಕರಾಗಿ ಸಾವಿರಾರು ಮಕ್ಕಳ ಭವಿಷ್ಯ ರೂಪಿಸಿದ್ದಾರೆ. ಕರ್ತವ್ಯದಿಂದ ನಿವೃತ್ತಿಗೊಂಡ ಅವರ ಮುಂದಿನ ಜೀವನವು ಸುಖಮಯವಾಗಿರಲೆಂದು ಹಾರೈಸಿದರು. ಮುಖ್ಯ ಅತಿಥಿಗಳಾಗಿದ್ದ ಧರ್ಮಗುರು ರೆ|ಫಾ| ಪಿ.ಕೆ.ಅಬ್ರಹಾಂ, ಆಡಳಿತ ಮಂಡಳಿಯ ಕೋಶಾಧಿಕಾರಿ ಎ. ಎ. ಅಬ್ರಹಾಂ, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎನ್. ಇಸ್ಮಾಯಿಲ್, ಮುಖ್ಯಗುರು ಸರೋಜಕುಮಾರಿ ಎಂ.,ರವರು ಶುಭ ಹಾರೈಸಿದರು.

ಕೆ.ಸಿ.ಪೌಲೋಸ್‌ರವರಿಗೆ ಆಡಳಿತ ಮಂಡಳಿ, ಶಿಕ್ಷಕ-ಶಿಕ್ಷಕೇತರ ವೃಂದ, ವಿದ್ಯಾರ್ಥಿವೃಂದ ಮತ್ತು ಪೂರ್ವ ವಿದ್ಯಾರ್ಥಿಗಳ ಪರವಾಗಿ ಶಾಲು, ಫಲಪುಷ್ಪ, ಸ್ಮರಣಿಕೆಗಳನ್ನು ನೀಡಿ ಸನ್ಮಾನಿಸಲಾಯಿತು. ಶಿಕ್ಷಕ ಎಂ.ಐ. ತೋಮಸ್‌ರವರು ಅಭಿನಂದನಾ ಭಾಷಣ ಮಾಡಿದರು. ಶಿಕ್ಷಕರ ಪರವಾಗಿ ಉಪನ್ಯಾಸಕ ವಿಶ್ವನಾಥ ಶೆಟ್ಟಿ ಶುಭಹಾರೈಸಿದರು. ನಿವೃತ್ತ ಶಿಕ್ಷಕರ ಪರವಾಗಿ ಆರ್. ವೆಂಕಟ್ರಮಣ ಶುಭಕೋರಿದರು. ಪ್ರಾಚಾರ್ಯ ಎಂ.ಕೆ.ಏಲಿಯಾಸ್ ಸ್ವಾಗತಿಸಿ, ಮುಖ್ಯಗುರು ಹರಿಪ್ರಸಾದ್ ವಂದಿಸಿದರು. ಉಪನ್ಯಾಸಕ ಚೇತನ್ ಆನೆಗುಂಡಿ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಪೌಲೋಸ್‌ರವರ ಪೂರ್ವ ವಿದ್ಯಾರ್ಥಿ ಚಿತ್ರ ಕಲಾವಿದ ವಿನೋದ್ ಕೊಕ್ಕಡರವರು ತಾವು ರಚಿಸಿದ ಕಲಾಕೃತಿಯನ್ನು ಗುರುಕಾಣಿಕೆಯಾಗಿ ನೀಡಿದರು. ಜಿ.ಪಂ.ಸದಸ್ಯರಾದ ಪಿ.ಪಿ.ವರ್ಗೀಸ್, ಸರ್ವೋತ್ತಮ ಗೌಡ ಮತ್ತಿತರರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.