HomePage_Banner
HomePage_Banner
HomePage_Banner

ನೆಲ್ಯಾಡಿ ಗ್ರಾ.ಪಂ.ವತಿಯಿಂದ ವೈದ್ಯಾಧಿಕಾರಿ ಡಾ.ಕೃಷ್ಣಾನಂದರಿಗೆ ಸನ್ಮಾನ

Puttur_Advt_NewsUnder_1
Puttur_Advt_NewsUnder_1


ನೆಲ್ಯಾಡಿ: ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ, ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಭಾರ ವೈದ್ಯಾಧಿಕಾರಿಯಾಗಿದ್ದು ಸರಕಾರದ ವತಿಯಿಂದಲೇ ಉನ್ನತ ವ್ಯಾಸಾಂಗಕ್ಕೆ ಆಯ್ಕೆಯಾಗಿರುವ ಡಾ. ಕೃಷ್ಣಾನಂದರವರನ್ನು ನೆಲ್ಯಾಡಿ ಗ್ರಾ.ಪಂ.ವತಿಯಿಂದ ಸನ್ಮಾನಿಸಲಾಯಿತು.

ಜಿ.ಪಂ.ಸದಸ್ಯ ಸರ್ವೋತ್ತಮ ಗೌಡರವರು ಸನ್ಮಾನಿಸಿದರು. ಬಳಿಕ ಮಾತನಾಡಿದ ಅವರು, ಡಾ.ಕೃಷ್ಣಾನಂದರವರು ರೋಗಿಗಳ ನೋವಿಗೆ ಸೂಕ್ತ ರೀತಿಯಲ್ಲಿ ಸ್ಪಂಧಿಸುವ ಮೂಲಕ ಇಲ್ಲಿ ಅತ್ಯುತ್ತಮ ಸೇವೆ ನೀಡಿದ್ದಾರೆ. ಅಲ್ಲದೇ ನೆಲ್ಯಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅವಶ್ಯಕವಿದ್ದ ಸೌಲಭ್ಯಗಳನ್ನು ಸರಕಾರದ ಮಟ್ಟದಿಂದ ಮಂಜೂರುಗೊಳಿಸುವಲ್ಲಿಯೂ ಪ್ರಯತ್ನಿಸಿ, ಆಸ್ಪತ್ರೆಯ ಅಭಿವೃದ್ಧಿಗೆ ಪ್ರಯತ್ನಿಸಿದ್ದಾರೆ. ಅವರ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದರು. ತಾಲೂಕು ವೈದ್ಯಾಧಿಕಾರಿ ಡಾ.ಅಶೋಕ್ ಕುಮಾರ್ ರೈ ಶುಭ ಹಾರೈಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ನೆಲ್ಯಾಡಿ ಗ್ರಾ.ಪಂ.ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ ಮಾತನಾಡಿ, ತನ್ನ ನಿಸ್ವಾರ್ಥ ಹಾಗೂ ಪ್ರಾಮಾಣಿಕ ಸೇವೆಯ ಮೂಲಕ ಡಾ.ಕೃಷ್ಣಾನಂದರವರು ನೆಲ್ಯಾಡಿಯ ಜನತೆಯ ಪ್ರೀತಿಯನ್ನು ಗಳಿಸಿದ್ದಾರೆ. ಆರೋಗ್ಯ ಕೇಂದ್ರವನ್ನು ದೇವಾಲಯದ ರೀತಿಯಲ್ಲಿ ಕಾಪಾಡಿಕೊಂಡು ಖಾಸಗಿ ಆಸ್ಪತ್ರೆಗಳಿಗಿಂತಲೂ ಮಿಗಿಲಾಗಿ ಅಭಿವೃದ್ಧಿ ಪಡಿಸಿದ್ದಾರೆ. ಇವರ ಸೇವೆ ಶ್ಲಾಘನೀಯ ಎಂದು ಶುಭಹಾರೈಸಿದರು. ಆಸ್ಪತ್ರೆಯ ಸಿಬ್ಬಂದಿಗಳು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಡಾ.ಕೃಷ್ಣಾನಂದರು ಕೃತಜ್ಞತೆ ಸಲ್ಲಿಸಿದರು. ನೆಲ್ಯಾಡಿ ಗ್ರಾ.ಪಂ.ಪಿಡಿಒ ಮಂಜುಳ ಎನ್., ಕಾರ್ಯದರ್ಶಿ ದೇವರಾಜ್, ಸದಸ್ಯ ಅಬ್ರಹಾಂ, ಸಿಬ್ಬಂದಿ ಶಿವಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.