ಲಾಯಿಲ: ರಾಷ್ಟ್ರೀಯ ಹೆದ್ದಾರಿಯ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಿಸಿದ ಯುವಕರ ತಂಡ

0

ಲಾಯಿಲ : ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡದ ಸರ್ಕಾರ, ಜನಪ್ರತಿನಿಧಿಗಳ ಕಾರ್ಯವೈಖರಿಯನ್ನು ಖಂಡಿಸಿ ದೀಪಾವಳಿ ಬಲಿಪಾಡ್ಯದ ಸಂಭ್ರಮದ ನಡುವೆಯೂ ಸಮಾನಮನಸ್ಕರ ಯುವಕರ ತಂಡ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಅ.26ರಂದು ಸಂಜೆ ಬೆಳ್ತಂಗಡಿ ಸಮೀಪದ ಲಾಯಿಲ ಗ್ರಾಮದ ರಾಘವೇಂದ್ರ ಮಠದ ಹತ್ತಿರ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ, ಸಿಪಿಐ(ಎಂ) ನಾಯಕ ಶೇಖರ್ ಲಾಯಿಲ ಮತ್ತಿತರರು ಭಾಗಿಯಾಗಿದ್ದರು.

LEAVE A REPLY

Please enter your comment!
Please enter your name here