ಗ್ರಾಮ ಪಂಚಾಯತ್ ಧರ್ಮಸ್ಥಳ:-ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮ

0

ಧರ್ಮಸ್ಥಳ:  ಕರ್ನಾಟಕ ಸರಕಾರದ ನಿರ್ದೇಶನದಂತೆ ಧರ್ಮಸ್ಥಳ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ಎದುರುಗಡೆ ಪ್ರವಚನ ಮಂಟಪದಲ್ಲಿ ನಾಡು ನುಡಿಯ ಬಗ್ಗೆ ಅಭಿಯಾನ ಮೂಡಿಸುವ ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಗೀತಾ ಕವನಗಳನ್ನು ನಾಡಿನ ಹೆಮ್ಮೆಯ ಕವಿಗಳು ರಚಿಸಿದ ನನ್ನ ನಾಡು ನನ್ನ ಹಾಡು ಸಮೂಹ ಗೀತ ಗಾಯನ ಕನ್ನಡ ನಾಡು ನುಡಿಯ ಶ್ರೇಷ್ಠತೆಯನ್ನು ಸಾರುವ ನಾಡಗೀತೆಯಾದ ಜಯ ಭಾರತ ಜನನಿಯ ತನುಜಾತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾ ಚೇತನ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು, ಎಂಬ ನಮ್ಮ ನಾಡಿನ ಗೀತೆಯನ್ನು ಕನ್ಯಾಕುಮಾರಿ ಯುವತಿ ಮಂಡಲದ ಸದಸ್ಯರು, ರಂಗಶಿವ ಕಲಾತಂಡ ಧರ್ಮಸ್ಥಳ, ಗ್ರಾಮಸ್ಥರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳಾಗಿ ಆಗಮಿಸಿದ ಬೇರೆ ಬೇರೆ ಊರಿನ ಜನರೊಂದಿಗೆ ಒಟ್ಟು ಸೇರಿ ಏಕಕಾಲದಲ್ಲಿ ಅ.28 ರಂದ ಹಾಡಲಾಯಿತು. ಸಾವಿರಾರು ಯಾತ್ರಾರ್ಥಿಗಳು ಹಾಗೂ ಗ್ರಾಮಸ್ಥರು ವೀಕ್ಷಿಸಿದರು. ಇವುಗಳ ಕೇಳುವಿಕೆಯಿಂದ ನಮ್ಮಲ್ಲಿ ನಮ್ಮ ನಾಡಿನ ಅಭಿಮಾನವನ್ನು ಹೆಚ್ಚಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತು ಅಧ್ಯಕ್ಷರಾದ  ಜಯ ಮೋನಪ್ಪ ಗೌಡ, ಉಪಾಧ್ಯಕ್ಷರಾದ  ಪಿ ಶ್ರೀನಿವಾಸರಾವ್, ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನದ ವ್ಯವಸ್ಥಾಪಕರಾದ ಶ್ರೀ ಲಕ್ಷ್ಮೀನಾರಾಯಣ ರಾವ್, ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಸುಭಾಷ್ ಚಂದ್ರ ರಾಜ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಉಮೇಶ್ ಕೆ, ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ, ಶ್ರೀ ಕ್ಷೇತ್ರ ಧರ್ಮಸ್ಥಳ ಸಿಬ್ಬಂದಿ ವರ್ಗ, ಊರವರು ಉಪಸ್ಥಿತರಿದ್ದರು. ಡಾ. ದೇವಿಪ್ರಸಾದ್ ಬೊಲ್ಮ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here