Home_Page_Advt
Home_Page_Advt
Home_Page_Advt

ಕೌಡಿಚ್ಚಾರು: ಉಚಿತ ಆರೋಗ್ಯ ತಪಾಸಣಾ ಶಿಬಿರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು : ಆಲ್ ಕಾರ್ಗೋ ಲಾಜಿಸ್ಟಿಕ್ ಮಂಗಳೂರು, ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ, ಜನ ಶಿಕ್ಷಣ ಟ್ರಸ್ಟ್ ಮುಡಿಪು, ಅರಿಯಡ್ಕ ಗ್ರಾಮ ಪಂಚಾಯಿತಿ, ಪುತ್ತೂರು ಮತ್ತು ಕಾವು ಲಯನ್ಸ್ ಕ್ಲಬ್, ಅತ್ತಾವರ ಕೆಎಂಸಿ ಆಸ್ಪತ್ರೆ ಇವುಗಳ ಸಂಯುಕ್ತ ಆಶ್ರಯಲ್ಲಿ ಜೂ. 4 ರಂದು ಕೌಡಿಚ್ಚಾರಿನ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಯಿತು.

ಲಯನ್ಸ್ ಕ್ಲಬ್‌ನ ಜಿಲ್ಲಾ ಗವರ್ನರ್ ದೇವದಾಸ್ ಭಂಡಾರಿ ಅವರು ಶಿಬಿರವನ್ನು ಉದ್ಘಾಟಿಸಿದರು. ಅರಿಯಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸವಿತಾ ಅವರು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷೆ ಅನಿತಾ ಹೇಮನಾಥ ಶೆಟ್ಟಿ, ಕಾವು ಪಂಚಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ದಿವ್ಯನಾಥ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು.

ಕಾವು ಲಯನ್ಸ್ ಕ್ಲಬ್‌ನ ಅಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಜನ ಶಿಕ್ಷಣ ಟ್ರಸ್ಟ್‌ನ ನಿರ್ದೇಶಕ ಶೀನ ಶೆಟ್ಟಿ, ಅರಿಯಡ್ಕ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಲೋಕೇಶ್ ಚಾಕೋಟೆ, ಪ್ರಜ್ಞಾ ಸಲಹಾ ಕೇಂದ್ರದ ನಿರ್ದೇಶಕ ವಿಲಿಯಂ ಸಾಮ್‌ವೆಲ್, ಕೆಎಂಸಿ ಆಸ್ಪತ್ರೆಯ ಕೆ.ಅಲ್ಬರ್ಟ್ ಮೇರಿಯೋ ಪಿರೇರಾ, ಅರಿಯಡ್ಕ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪದ್ಮಕುಮಾರಿ, ಪಂಚಾಯಿತಿ ಕಾರ್ಯದರ್ಶಿ ಕೃಷ್ಣರಾಜ್ ಭಟ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಜ್ಞಾ ಸಲಹಾ ಕೇಂದ್ರದ ಸಂಯೋಜಕ ಅಶೋಕ್ ಸ್ವಾಗತಿಸಿ ,ವಂದಿಸಿದರು.

ಬೆಳಿಗ್ಗಿನಿಂದ ಅಪರಾಹ್ನ 2 ಗಂಟೆಯ ತನಕ ನಡೆದ ಶಿಬಿರದಲ್ಲಿ ಕಣ್ಣು,ಕಿವಿ,ಮೂಗು,ಗಂಟಲು, ರಕ್ತ ಸೇರಿದಂತೆ ವಿವಿಧ ಖಾಯಿಲೆಗಳ ತಪಾಸಣೆ ನಡೆಸಲಾಯಿತು. 216 ಮಂದಿ ಶಿಬಿರದ ಪ್ರಯೋಜನ ಪಡೆದುಕೊಂಡರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.