HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಬೆಟ್ಟಂಪಾಡಿ ಕಾಲೇಜಿನ ಪ್ರಾಂಶುಪಾಲರಾಗಿ ಡಾ. ವರದರಾಜ ಚಂದ್ರಗಿರಿ ಮರುನಿಯೋಜನೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಕಾರ್ಕಳ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪಪ್ರಾಂಶುಪಾಲರೂ, ಕನ್ನಡ ವಿಭಾಗದ ಮುಖ್ಯಸ್ಥರೂ ಆಗಿದ್ದ ಡಾ. ವರದರಾಜ ಚಂದ್ರಗಿರಿಯವರು ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಪ್ರಾಂಶುಪಾಲರಾಗಿ ಮರುನಿಯೋಜನೆಗೊಂಡು ಜೂ. 1 ರಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಬೆಟ್ಟಂಪಾಡಿ ಕಾಲೇಜಿನ ಪ್ರಾಂಶುಪಾಲರಾಗಿದ್ದ ರಾಧಾಕೃಷ್ಣ ಭಟ್‌ರವರು ಮೇ 31 ರಂದು ಸೇವಾ ನಿವೃತ್ತಿಗೊಂಡ ಬಳಿಕ ಅವರ ಸ್ಥಾನಕ್ಕೆ ಕಳೆದ ಎರಡು ವರ್ಷಗಳ ಹಿಂದೆ ಬೆಟ್ಟಂಪಾಡಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡಿದ್ದ ಡಾ. ಚಂದ್ರಗಿರಿಯವರನ್ನು ಕಾಲೇಜು ಶಿಕ್ಷಣ ಇಲಾಖೆಯ ಜಂಟಿನಿರ್ದೇಶಕರು ಅವರನ್ನು ಮರುನಿಯೋಜನೆಗೊಳಿಸಿ ಆದೇಶಿಸಿದ್ದಾರೆ. ಗ್ರಾಮೀಣ ಭಾಗದ ಸರಕಾರಿ ಪದವಿ ಕಾಲೇಜು ಆಗಿರುವ ಬೆಟ್ಟಂಪಾಡಿ ಕಾಲೇಜಿನ ಅಭಿವೃದ್ಧಿಯಲ್ಲಿ ಡಾ. ಚಂದ್ರಗಿರಿಯವರ ಸೇವೆ ಪರಿಗಣಿಸಿ ಜಂಟಿ ನಿರ್ದೇಶಕರು ಅವರನ್ನು ಮರುನಿಯೋಜನೆಗೊಳಿಸಿದ್ದಾರೆ ಎನ್ನಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕದ ಮಾಜಿ ಅಧ್ಯಕ್ಷರಾಗಿದ್ದ ಇವರು ಖ್ಯಾತ ಸಾಹಿತಿ, ಚಿಂತಕರಾಗಿ ತಮ್ಮ ವಿಶೇಷ ಉಪನ್ಯಾಸಗಳಿಂದಾಗಿ ಅವಿಭಜಿತ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಹೆಸರು ಹೊಂದಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

1 Comment

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.