HomePage_Banner
HomePage_Banner
HomePage_Banner
HomePage_Banner

ಇರ್ದೆ ಬೆಟ್ಟಂಪಾಡಿ ಬಿಲ್ಲವ ಸಂಘದ ವಾರ್ಷಿಕ ಮಹಾಸಭೆ- ಉಚಿತ ಪುಸ್ತಕ ವಿತರಣೆ, ನೂತನ ಸಮಿತಿ ರಚನೆ

Puttur_Advt_NewsUnder_1
Puttur_Advt_NewsUnder_1

ನಿಡ್ಪಳ್ಳಿ : ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಹಾಗೂ ಮಹಿಳಾ ವೇದಿಕೆ ಇರ್ದೆ ಬೆಟ್ಟಂಪಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಜೂ. 1ರಂದು ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.

ರೆಂಜ ಮಾಧವ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ತಾಲೂಕು ಬಿಲ್ಲವ ಸಂಘದ ಕಾರ್ಯದರ್ಶಿ  ಕೇಶವ ಪೂಜಾರಿ ಬೆದ್ರಾಳ  ಉದ್ಘಾಟಿಸಿದರು.

ನೂತನ ಸಮಿತಿ ರಚನೆ: ಈ ಸಂದರ್ಭದಲ್ಲಿ 2019-20 ನೇ ಸಾಲಿನ ಬಿಲ್ಲವ ಸಂಘದ ಬೆಟ್ಟಂಪಾಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಮಾಧವ ಪೂಜಾರಿಯವರನ್ನು ಪುನರಾಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವಿಠಲ ಪೂಜಾರಿ, ಕಾರ್ಯದರ್ಶಿಯಾಗಿ ವಿಜಯ ಪೂಜಾರಿ,  ಜತೆ ಕಾರ್ಯದರ್ಶಿಯಾಗಿ ಗೀತಾ ನಾರಾಯಣ ಹಾಗೂ ಕೋಶಾಧಿಕಾರಿಯಾಗಿ ಕೋಟಿ ಪೂಜಾರಿ ಅವರನ್ನು ಆಯ್ಕೆ ಮಾಡಲಾಯಿತು.

ಮಹಿಳಾ ಘಟಕದ ಅಧ್ಯಕ್ಷರಾಗಿ ಲಲಿತ ವಸಂತ ಪೂಜಾರಿ, ಉಪಾಧ್ಯಕ್ಷರಾಗಿ ಕಮಲ ಕೃಷ್ಣಪ್ಪ ಪೂಜಾರಿ, ಕಾರ್ಯದರ್ಶಿಯಾಗಿ ಶಕುಂತಲಾ ನೇಮು ಪೂಜಾರಿ, ಜತೆ ಕಾರ್ಯದರ್ಶಿಯಾಗಿ ರೇಖಾ ಶೀನಪ್ಪ ಪೂಜಾರಿ ಹಾಗೂ ಕೋಶಾಧಿಕಾರಿಯಾಗಿ ವಸಂತಿ ಅವರನ್ನು ಆಯ್ಕೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸುಮಾರು 65 ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಬಿಲ್ಲವ ಸಂಘದ ಉಪಾಧ್ಯಕ್ಷರಾದ  ಪೂಜಾ ವಸಂತ್,  ಕೋಶಾಧಿಕಾರಿ ನಾಗೇಶ್ ಬಲ್ನಾಡು,ಗುರು ಮಂದಿರದ ಕಾರ್ಯನಿರ್ವಾಹನಾಧಿಕಾರಿ ಆರ್. ಸಿ. ನಾರಾಯಣ ರೆಂಜ, ವಲಯ ಸಂಚಾಲಕ ಭಾಸ್ಕರ ಕರ್ಕೇರ ನುಳಿಯಾಲು, ಯುವವಾಹಿನಿ ಘಟಕದ ಮಾಜಿ ಅದ್ಯಕ್ಷ ಹರೀಶ್ ಶಾಂತಿ ಹಾಗೂ ಬೆಟ್ಟಂಪಾಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ  ಬೇಬಿ ಜಯರಾಮ ಉಪಸ್ಥಿತರಿದ್ದರು. ಸೌಜನ್ಯಾ ಹೆಚ್ ವಂದಿಸಿ, ಸ್ವಾತಿ ಎಂ ಪೂಜಾರಿ ರೆಂಜ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.