ಬಜಿರೆ: ವಲಯ ಮಟ್ಟದ ಕ್ರೀಡಾಕೂಟದ ಉದ್ಘಾಟನೆ: ಕ್ರೀಡೆಯಲ್ಲೂ ಉನ್ನತ ಸಾಧನೆ ಮಾಡಲು ಸಾಧ್ಯ: ನೇಮಯ್ಯ ಕುಲಾಲ್

0


ವೇಣೂರು: ಮಕ್ಕಳು ದೈಹಿಕವಾಗಿ ಬೆಳೆಯಲು ಪ್ರಾಥಮಿಕ ಹಂತದಲ್ಲೇ ಕ್ರೀಡೆ ಸಹಕಾರಿಯಾಗಿದೆ. ಶಿಕ್ಷಣದ ಜತೆಗೆ ಕ್ರೀಡೆಯಲ್ಲೂ  ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ವೇಣೂರು ಗ್ರಾ.ಪಂ. ಅಧ್ಯಕ್ಷ ನೇಮಯ್ಯ ಕುಲಾಲ್ ಹೇಳಿದರು.

ಬಜಿರೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಅ.29 ರಂದು ಜರಗಿದ ಬಜಿರೆ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕ-ಬಾಲಕಿಯರ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಬಜಿರೆ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ದಿನೇಶ್ ಪೂಜಾರಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಆಸಕ್ತಿ ವಹಿಸಿಕೊಂಡಾಗ ಸಮಾಜದಲ್ಲಿ ಯಾವುದಾದರೂ ಒಂದು ಕ್ಷೇತ್ರದಲ್ಲಿ ಸಾಧನೆಗೆಯ್ಯಲು ಸಾಧ್ಯ ಎಂದರು. ವೇಣೂರು ಗ್ರಾ.ಪಂ. ಉಪಾಧ್ಯಕ್ಷೆ ಪುಷ್ಪಾ ಡಿ., ಎಸ್‌ಡಿಎಂಸಿ ಉಪಾಧ್ಯಕ್ಷ ಸುನಿಲ್ ಕುಮಾರ್, ಪಂ. ಮಾಜಿ ಅಧ್ಯಕ್ಷ ಸತೀಶ್ ಹೆಗ್ಡೆ, ಪಂ. ಸದಸ್ಯರಾದ ಮಲ್ಲಿಕಾ ಹೆಗ್ಡೆ, ಸುಜಾತ, ಲೀಲಾವತಿ, ಸಿಆರ್‌ಪಿ ಆರತಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಜಿಲ್ಲಾ ಕೋಶಾಧಿಕಾರಿ ರಾಜೇಶ್ ನೆಲ್ಯಾಡಿ, ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿ. ಪ್ರಭಾಕರ ಹೆಗ್ಡೆ ಹಟ್ಟಾಜೆ, ಪ್ರವೀಣ್ ಪೂಜಾರಿ ಜಾರಿಗೆದಡಿ, ಭಾಸ್ಕರ ಪೂಜಾರಿ ನಾಯರ್‍ಮೇರು ತಾಯಂದಿರ ಸಮಿತಿ ಅಧ್ಯಕ್ಷೆ ಜಯಶ್ರೀ ಮತ್ತಿತರರು ಉಪಸ್ಥಿತರಿದ್ದರು.

ವಿವೇಕಾನಂದ ಸೇವಾ ಟ್ರಸ್ಟ್‌ನ ಯಂ. ವಿಜಯರಾಜ ಅಧಿಕಾರಿ ವಿಜೇತರಿಗೆ ಬಹುಮಾನ ವಿತರಿಸಿದರು.

ಬಜಿರೆ ಶಾಲೆಯ ಮುಖ್ಯಶಿಕ್ಷಕಿ ಕಮಲಾಜಿ ಎಸ್. ಜೈನ್ ಸ್ವಾಗತಿಸಿ, ಬಜಿರೆ ಕ್ಲಸ್ಟರ್ ಸಿಆರ್‌ಪಿ ರಾಜೇಶ್ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ದೀಪಾವತಿ ನಿರೂಪಿಸಿದರು.

 

LEAVE A REPLY

Please enter your comment!
Please enter your name here