ಉಜಿರೆ ಶ್ರೀ.ಧ.ಮ.ಸೆಕಂಡರಿ ಪ್ರೌಢ ಶಾಲೆಯಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ

0

ಉಜಿರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರದ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಉಜಿರೆ ಶ್ರೀ.ಧ.ಮ.ಸೆಕಂಡರಿ ಪ್ರೌಢ ಶಾಲೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯ ಪದ್ಮರಾಜ್ ಎನ್ ರವರ ನೇತೃತ್ವದಲ್ಲಿ  ಅ.28ರಂದು  ಪೂರ್ವಾಹ್ನ 11.00 ಗಂಟೆಗೆ ಸರಿಯಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಅಧ್ಯಾಪಕ ವೃಂದ, ಬಿ.ಇಡಿ ಪ್ರಶಿಕ್ಷಣಾರ್ಥಿಗಳು ಹಾಗೂ 487 ವಿದ್ಯಾರ್ಥಿಗಳನ್ನು ಒಳಗೊಂಡು ಶಿಕ್ಷಕ ರಮೇಶ್ ಮಯ್ಯರವರು ಕನ್ನಡ ನಾಡುನುಡಿಯನ್ನು ಉಳಿಸಿ ಬೆಳೆಸುವ ಸಂಕಲ್ಪ ವಿಧಿಯನ್ನು ವಾಚಿಸುವುದರೊಂದಿಗೆ ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳೆಲ್ಲರೂ ಪ್ರತಿಜ್ಞಾವಿಧಿ ಸ್ವೀಕರಿಸುವುದರು. ಶಿಕ್ಷಕಿ ತ್ರಿವೇಣಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here