ಮೃತ್ತಿಕೆ ಸಂಗ್ರಹ ಅಭಿಯಾನ ರಥಕ್ಕೆ ವೇಣೂರಿನಲ್ಲಿ ಅದ್ದೂರಿ ಸ್ವಾಗತ

0

ವೇಣೂರು: ಬೆಂಗಳೂರಿನಲ್ಲಿ ನಡೆಯಲಿರುವ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ತಾಲೂಕಿನ ಗ್ರಾ.ಪಂ. ವ್ಯಾಪ್ತಿಗಳಿಂದ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನಕ್ಕೆ ರಾಜ್ಯದಲ್ಲಿ ಸಂಚರಿಸುವ ರಥವನ್ನು ವೇಣೂರಿನಲ್ಲಿ ಅ.29ರಂದು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು.

ಶಾಸಕ ಹರೀಶ್ ಪೂಂಜ ಅವರು ರಥಕ್ಕೆ ಸ್ವಾಗತ ನೀಡಿದರು. ಬಳಿಕ ರಥ ಜಾಥಾದ ಮೂಲಕ ಬೆಳ್ತಂಗಡಿಗೆ ತೆರಳಿತು.

 

ವಿಧಾನಪರಿಷತ್ ಶಾಸಕ ಪ್ರತಾಪ್‌ಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ವೇಣೂರು ಗ್ರಾ.ಪಂ. ಅಧ್ಯಕ್ಷ ನೇಮಯ್ಯ ಕುಲಾಲ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಸೇರಿದಂತೆ ತಾಲೂಕಿನ ವಿವಿಧ ಇಲಾಖಾಧಿಕಾರಿಗಳು, ಜನಪ್ರತಿನಿಧಿಗಳು, ವೇಣೂರಿನ ವಿವಿಧ ಸಂಘಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here