ಕಲ್ಮಂಜದಲ್ಲಿ ತೋಟಕ್ಕೆ ಹೋದ ಉದಯ ಕರಿಯನೆಲ ಸಾವು

0

ಬೆಳ್ತಂಗಡಿ : ಮನೆಯಿಂದ ತೋಟಕ್ಕೆ ಹೋದ ವ್ಯಕ್ತಿಯೊಬ್ಬರು ತೋಟದಲ್ಲಿ ಸಾವನ್ನಪ್ಪಿದ ಘಟನೆ ಕಲ್ಮಂಜದಲ್ಲಿ ಅ.30 ರಂದು ಸಂಜೆ ನಡೆದಿದೆ.

ಕಲ್ಮಂಜ ಗ್ರಾಮದ ಕರಿಯನೆಲದ ಕರ್ಬಿತ್ತಿಲ್ ನಿವಾಸಿ ಶೀನಪ್ಪ ಗೌಡರ ಮಗ ಉದಯ ಗೌಡ(43) ಎಂಬವರು ತೋಟಕ್ಕೆ ಹೋದವರು ವಾಪಸ್ ಬಂದಿರಲ್ಲಿಲ್ಲ ಮನೆಮಂದಿ ಸುತ್ತಮುತ್ತ ಹುಡುಕಾಟ ನಡೆಸಿದಾಗ ಸಂಜೆ ವೇಳೆಗೆ ತೋಟದಲ್ಲಿ ಬಿದ್ದು ಸಾವನ್ನಪ್ಪಿರುವುದು ಕಂಡು ಬಂದಿದೆ. ಶವವನ್ನು ಶವಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ.

ಈ ಬಗ್ಗೆ ಮನೆಮಂದಿ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದು ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್.ಡಿ ತಂಡ ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಇವರು ಯಾವ ರೀತಿಯಾಗಿ ಮೃತಪಟ್ಟಿದ್ದಾರೆ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆಯ ಬಳಿಕವಷ್ಟೆ ತಿಳಿದು ಬರಬೇಕಾಗಿದೆ.

LEAVE A REPLY

Please enter your comment!
Please enter your name here