ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ಸಂಸ್ಥೆಗಳ ವಿರುದ್ಧ ಅಪಪ್ರಚಾರ ಆರೋಪ : ಇಂದು ಸೋಮನಾಥ ನಾಯಕ್ ನ್ಯಾಯಾಲಯಕ್ಕೆ ಹಾಜರು

0

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ಸಂಸ್ಥೆಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರಿಕ ಸೇವಾ ಟ್ರಸ್ಟ್ ನ ಅಧ್ಯಕ್ಷರಾಗಿರುವ ಸೋಮನಾಥ್ ನಾಯಕ್ ಅವರಿಗೆ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ನೀಡಿದ್ದು, ಸುಪ್ರೀಂ ಕೋರ್ಟ್ ನಲ್ಲಿ ಅವರ ಮೇಲ್ಮನವಿ ವಜಾ ಗೊಂಡಿರುವುದರಿಂದ ಅವರು ಇಂದು ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ ಎಂದು ವರದಿಯಾಗಿದೆ.

ಇಂದು ಸಂಜೆ 3 ಗಂಟೆಗೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಹೇಳಲಾಗಿದೆ. ಬಳಿಕ ಬೆಳ್ತಂಗಡಿ ಪೊಲೀಸರು ಅವರನ್ನು ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ಯಲಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಹಾಗೂ ಸಂಸ್ಥೆಗಳ ಕುರಿತು ಗೌರವಕ್ಕೆ ಚ್ಯುತಿ ತರುವಂತ ಯಾವುದೇ ರೀತಿಯಲ್ಲಿ ಬರವಣಿಗೆ ಅಥವಾ ಹೇಳಿಕೆ ನೀಡಬಾರದೆಂದು ಬೆಳ್ತಂಗಡಿ ನ್ಯಾಯಾಲಯ ಸೋಮನಾಥ್ ನಾಯಕ್ ಸೇರಿದಂತೆ ಐದು ಜನರಿಗೆ ಆದೇಶ ಮಾಡಿತ್ತು. ಆದರೆ ಅದನ್ನು ಮೀರಿ ಮತ್ತೆ ಸೋಮನಾಥ್ ನಾಯಕ್ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಸೋಮನಾಥ್ ನಾಯಕ್ ದೋಷಿ ಎಂದು ಪರಿಗಣಿಸಿ ಮೂರು ತಿಂಗಳ ಸಜೆ ಮತ್ತು 4.5 ಲಕ್ಷ ಪರಿಹಾರ ನೀಡಬೇಕೆಂದು ಆದೇಶ ಮಾಡಿತ್ತು. ಈ ಆದೇಶದ ವಿರುದ್ಧ ಸೋಮನಾಥ ನಾಯಕ್ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿಯೂ ಬೆಳ್ತಂಗಡಿ ನ್ಯಾಯಾಲಯದ ಆದೇಶ ಎತ್ತಿ ಹಿಡಿದು ಸೋಮನಾಥ ನಾಯಕ್ ಅವರ ಮೇಲ್ಮನವಿ ವಜಾಗೊಂಡಿರುವುದರಿಂದ ಈಗ ಅವರು ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದಾರೆ.

ಅವರ ಪರ ವಕೀಲರಾದ ಭಾಸ್ಕರ್ ಹೊಳ್ಳ ಅವರು ಬೆಳ್ತಂಗಡಿ ಕೋರ್ಟ್ ಗೆ ಮೂರು ಗಂಟೆಗೆ ನ್ಯಾಯಾಧೀಶರ ಮುಂದೆ ಸೋಮನಾಥ ನಾಯಕ್ ಶರಣಾಗತಿ ಆಗುತ್ತಿದ್ದಾರೆ ಎಂಬ ಬಗ್ಗೆ ಅರ್ಜಿ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here