ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ

0

 

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಬೆಳಾಲು ಇವರ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರುಗಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ಯೋಜನಾಧಿಕಾರಿಗಳಾದ  ತಿಮ್ಮಯ್ಯನವರು ಮಾತನಾಡುತ್ತಾ , ವಿದ್ಯಾರ್ಥಿಗಳಲ್ಲಿ ಮಾದಕ ವಸ್ತುಗಳ ಬಳಕೆಯ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯಕ್ರಮ ಇದಾಗಿದೆ. ವಿದ್ಯಾರ್ಥಿಗಳ ಮೂಲಕ ಭವಿಷ್ಯದಲ್ಲಿ, ವ್ಯಸನ ಮುಕ್ತ ಸಮಾಜವನ್ನು ಕಟ್ಟುವ ದೂರದೃಷ್ಟಿ ಯೋಜನೆಯಿದು. ದುಶ್ಚಟಗಳು ನಮ್ಮ ಆರೋಗ್ಯವನ್ನು ಹಾಳುಮಾಡುವುದಲ್ಲದೆ ಮಾನಕ್ಕೂ ಹಾನಿಯುಂಟುಮಾಡುತ್ತದೆ. ವಿದ್ಯಾರ್ಥಿಗಳು ತಮ್ಮ ಕಲಿಕಾವಧಿಯಲ್ಲಿ ಸಂಸ್ಕಾರಯುತವಾದ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಉತ್ತಮ ಹವ್ಯಾಸಗಳು, ಒಳ್ಳೆಯವರ ಸಹವಾಸ ಮತ್ತು ದುಶ್ಚಟ ಮುಕ್ತ ನಡವಳಿಕೆಯನ್ನು ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಯೋಜನಾಧಿಕಾರಿಗಳಾದ ಸುರೇಂದ್ರ , ಉಜಿರೆ ವಲಯದ ಮೇಲ್ವಿಚಾರಕರಾದ ವನಿತಾ ಮತ್ತು ಸೇವಾನಿರತರಾದ  ಆಶಾರವರು ಮತ್ತು ಶಾಲಾ ಶಿಕ್ಷಕ ಸಿಬ್ಬಂದಿಯವರು ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ಸ್ವಾಗತಿಸಿ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು. ಕಾರ್ಯಕ್ರಮದ ಸಂಯೋಜಕರಾದ ವಾರಿಜ ಎಸ್ ಗೌಡರವರು ಧನ್ಯವಾದ ಸಲ್ಲಿಸಿದರು.

LEAVE A REPLY

Please enter your comment!
Please enter your name here