ಮುಂಡಾಜೆ ಪ್ರೌಢಶಾಲೆಯಲ್ಲಿ ಕಾರ್ತಿಕ ಮಾಸದ ದೀಪಾವಳಿ ಆಚರಣೆ

0

ಮುಂಡಾಜೆ: ವಿವೇಕಾನಂದ ವಿದ್ಯಾ ಸಂಸ್ಥೆ ಮುಂಡಾಜೆ ಇದರ ಆಶ್ರಯದಲ್ಲಿ ಮುಂಡಾಜೆ ಪ್ರೌಢಶಾಲೆಯಲ್ಲಿ ಕಾರ್ತಿಕ ಮಾಸದ ದೀಪಾವಳಿ ಆಚರಣೆಯು ಅ.28ರಂದು ಆಚರಿಸಲಾಯಿತು.

ಹಣತೆಗಳನ್ನು ಬೆಳಗಿಸುವುದರೊಂದಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾದ ವಿನಯಚಂದ್ರ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದರ ಅಂಗವಾಗಿ ವಿದ್ಯಾರ್ಥಿಗಳಿಗೆ ಗೂಡು ದೀಪ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ವಿದ್ಯಾರ್ಥಿಗಳು ಭಜನೆ, ಕುಣಿತ ಭಜನೆ ಮತ್ತು ಹಣತೆಗಳನ್ನು ಬೆಳಗಿಸುವುದರ ಮೂಲಕ ದೀಪಾವಳಿ ಹಬ್ಬವನ್ನು ಆಚರಿಸಿ ಸಂಭ್ರಮ ಪಟ್ಟರು.

ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಕೋಶಾಧಿಕಾರಿಯಾದ  ರವಿ ಮಂಡ್ಯ ಮತ್ತು ಆಡಳಿತ ಮಂಡಳಿಯ ಸದಸ್ಯರು, ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ಸಿಗೊಳಿಸಿದರು.

ಅಧ್ಯಾಪಕರಾದ  ಆನಂದ ಜಿ ಇವರು ದೀಪಾವಳಿ ಹಬ್ಬ ಆಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಮುಖ್ಯ ಶಿಕ್ಷಕಿ  ಜಯಂತಿ ಟಿ ಇವರು ಸ್ವಾಗತಿಸಿ,  ಪಾರ್ವತಿ ಯು ಇವರು ಕಾರ್ಯಕ್ರಮವನ್ನು ನಿರೂಪಿಸಿದರು.ಸುರೇಶ್ ಎಮ್ ಟಿ ಇವರು ಧನ್ಯವಾದವಿತರು. ಎಲ್ಲಾ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here