ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ತಾಲೂಕು ಮಟ್ಟದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ವತಿಯಿಂದ ಕನ್ನಡ ರಾಜ್ಯೋತ್ಸವ-2022 ಆಚರಣೆಯು ನ.1ರಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಜರುಗಿತು.

ಧ್ವಜಾರೋಹಣವನ್ನು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಕೆ.ಎ.ಎಸ್ ನೆರವೇರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು. ಶ್ರೀ ಧ.ಮಂ.ಕಾಲೇಜು‌‌ ಉಜಿರೆ ಯು ಕನ್ನಡ ಉಪನ್ಯಾಸಕ ಡಾ. ನಾಗಣ್ಣ ಪ್ರಧಾನ ಭಾಷಣ ಮಾಡಿದರು.

ವೇದಿಕೆಯಲ್ಲಿ ನ.ಪಂ ಅಧ್ಯಕ್ಷೆ ರಜನಿ ಕುಡ್ವ, ವೃತ್ತ ನಿರೀಕ್ಷಕ ಶಿವಕುಮಾರ್, ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ಸಮಾಜ ಕಲ್ಯಾಣಾಧಿಕಾರಿ ಹೇಮಚಂದ್ರ, ನ.ಪಂ ಮುಖ್ಯಾಧಿಕಾರಿ ರಾಜೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಅಕ್ಷರ ದಾಸೋಹ ಯೋಜನಾಧಿಕಾರಿ ತಾರಕೇಸರಿ, ನಿವೃತ್ತ ಯೋಧ ಎಂ.ಆರ್ ಜೈನ್, ಗೃಹ ರಕ್ಷಕ ಘಟಕಾಧಿಕಾರಿ ಜಯಾನಂದ ಲಾಯಿಲ, ಬೆಳ್ತಂಗಡಿ ಎಸ್ ಐ ನಂದಕುಮಾರ್ , ಎಪಿಎಂಸಿ ಕಾರ್ಯದರ್ಶಿ ರವೀಂದ್ರ, ಮೆಸ್ಕಾಂ ಇಲಾಖೆಯ ಶಿವಶಂಕರ್, ಉಪತಹಸೀಲ್ದಾರ್ ಜಯ, ಶಿರಾಸ್ತೆದಾರ್ ರವಿಕುಮಾರ್ ಉಪಸ್ಥಿತರಿದ್ದರು.

ಸಿಆರ್ ಪಿ ವಾರಿಜ ಮತ್ತು ಪ್ರತಿಭಾ ಕಾರ್ಯಕ್ರಮ ನಿರೂಪಿಸಿದರು.

 

LEAVE A REPLY

Please enter your comment!
Please enter your name here