ಉಜಿರೆ ಶ್ರೀ ಧ. ಮ. ಪ. ಪೂ. ಕಾಲೇಜಿನಲ್ಲಿ ಪೋಷಕರ ಸಭೆ

0

ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ.ಕಾಲೇಜಿನಲ್ಲಿ ಪೋಷಕರ ಸಭೆ ಅ.29 ಜರುಗಿತು.

ಪ್ರಿನ್ಸಿಪಾಲ್ ಪ್ರೊ. ದಿನೇಶ್ ಚೌಟ ಅಧ್ಯಕ್ಷತೆ ವಹಿಸಿ ಮಾತನಾಡಿ ಉತ್ತಮ ಫಲಿತಾಂಶವನ್ನು ದಾಖಲಿಸುತ್ತಿರುವ ನಮ್ಮ ಶಿಕ್ಷಣ ಸಂಸ್ಥೆ ರಾಜ್ಯ ಹಾಗೂ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ. ಶಿಕ್ಷಣ ಸಂಸ್ಥೆಗಳ ರೂವಾರಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗೆ ನಾನಾ ರೀತಿಯ ಸೌಕರ್ಯಗಳನ್ನು ನೀಡಲಾಗುತ್ತಿದೆ
ಎಂದು ಹೇಳಿದರು.

ಎಸ್ ಡಿ ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ಇಂದಿನ ದಿನಗಳಲ್ಲಿ ಪೋಷಕರು ಹೆಚ್ಚಿನ ಸಮಯವನ್ನು ಮಕ್ಕಳ ಜತೆ ಕಳೆಯವ ಅಗತ್ಯ ಇದೆ.ಸಿದ್ದಾಂತಗಳ ಮೇಲೆ ನಂಬಿಕೆ ಇರಿಸಿ ಬದಲಾವಣೆಗಳಿಗೆ ಒಗ್ಗಿ ಕೊಳ್ಳಬೇಕು ಎಂದು ತಿಳಿಸಿ ಹದಿ ಹರೆಯದ ಸಮಸ್ಯೆಗಳ ಕುರಿತು ಉಪನ್ಯಾಸ ನೀಡಿದರು.

ವೈಸ್ ಪ್ರಿನ್ಸಿಪಾಲ್ ಪ್ರೊ.ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು. ಉಪನ್ಯಾಸಕ ದೀಕ್ಷಿತ್ ರೈ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರಾದ ಅವನಿ ಹೆಬ್ಬಾರ್ ಮತ್ತು ಪೂರ್ವಿಕಾ ವಿ.ನಾಥ್
ಪ್ರಾರ್ಥನೆ ಹಾಡಿದರು.

ಈ ಬಾರಿಯ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕ ಪಡೆದು ಇಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿರುವ 64 ವಿದ್ಯಾರ್ಥಿಗಳಿಗೆ ರೂ. 9,14,000 ಕ್ಕಿಂತ ಅಧಿಕ ವಿದ್ಯಾರ್ಥಿವೇತನವನ್ನು ಸಂಸ್ಥೆಯ ವತಿಯಿಂದ ವಿತರಿಸಲಾಯಿತು.

LEAVE A REPLY

Please enter your comment!
Please enter your name here