ಉಜಿರೆ: ಗುರುವಾಯನಕೆರೆ-ಉಜಿರೆ ತಾತ್ಕಾಲಿಕ ರಸ್ತೆ ಕಾಮಗಾರಿಗೆ ಚಾಲನೆ

0

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನ.19ರಿಂದ 24ರ ತನಕ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದ್ದು, ಈ ಸಂದರ್ಭ ಲಕ್ಷಾಂತರ ಭಕ್ತರು ಆಗಮಿಸಲಿದ್ದು ಭಕ್ತರ ಅನುಕೂಲಕ್ಕೆ ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಸರಿಪಡಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ರಾಜ್ಯಸಭಾ ಸದಸ್ಯರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರು ಪತ್ರ ಮುಖೇನ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ಸಿಎಂ 1 ಕೋಟಿ ರೂಪಾಯಿ ಮಂಜೂರು ಮಾಡಿದ್ದಾರೆ.

ಇದೀಗ 1 ಕೋಟಿ ಅನುದಾನದಲ್ಲಿ ಗುರುವಾಯನಕೆರೆ ಉಜಿರೆ ರಸ್ತೆಯನ್ನು ತಾತ್ಕಾಲಿಕವಾಗಿ ಸರಿಪಡಿಸಲು ಚಾಲನೆ ದೊರೆತಿದೆ.ಮುಗೇರೋಡಿ ಕನ್ಸ್ಟ್ರಕ್ಷನ್ ಈ ಗುತ್ತಿಗೆ ಕೆಲಸ ಜವಬ್ದಾರಿಯನ್ನು ಹೊತ್ತುಕೊಂಡಿದೆ.

 

 

LEAVE A REPLY

Please enter your comment!
Please enter your name here