Home_Page_Advt
Home_Page_Advt
Home_Page_Advt

ಯೋಗ ದಿನಾಚರಣೆಯ ಪ್ರಯುಕ್ತ ಉಚಿತ ಯೋಗ ಶಿಬಿರದ ಉದ್ಘಾಟನೆ

ಪ್ರಧಾನಮಂತ್ರಿ ಮೋದಿಜಿ ಅವರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗಾಸನಕ್ಕೆ ಸ್ಥಾನಮಾನ – ವಿದ್ಯಾ ಗೌರಿ

ಪುತ್ತೂರು: ಕರ್ನಾಟಕ ಸರಕಾರದ ಆಯುಷ್ ಇಲಾಖೆ ದ.ಕ ಜಿಲ್ಲಾ ಪಂಚಾಯತ್, ಸರಕಾರಿ ಯೋಗ ಹಾಗೂ ಪ್ರಕೃತಿ ಚಿಕಿತ್ಸಾ ಕೇಂದ್ರ ಪುತ್ತೂರು ರೋಟರಿ ಕ್ಲಬ್ ಪುತ್ತೂರು ಯುವ ಇದರ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ದರ್ಬೆಯ ಶ್ರೀರಾಮ ಸೌಧ ವಾಣಿಜ್ಯ ಸಂಕೀರ್ಣದಲ್ಲಿ ಜೂ.೫ರಿಂದ ೨೧ರವರೆಗೆ ನಡೆಯುವ ಉಚಿತ ಯೋಗ ಶಿಬಿರದ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಪುತ್ತೂರು ನಗರಸಭಾ ಸದಸ್ಯರಾದ ವಿದ್ಯಾ ಗೌರಿ ಅವರು ದೀಪ ಬೆಳಗಿಸುವುದರ ಮೂಲಕ ಶಿಬಿರ ಉದ್ಘಾಟಿಸಿ ಮಾತನಾಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗಾಸನಕ್ಕೆ ಸ್ಥಾನಮಾನ ಸಿಗುವಲ್ಲಿ ಪ್ರಧಾನಮಂತ್ರಿ ಮೋದಿಜಿ ಅವರ ಕೊಡುಗೆ ಅಪಾರ. ನಿರಂತರ ಯೋಗ, ಧ್ಯಾನ ಪ್ರಾಣಾಯಾಮ ಮಾಡುವುದರಿಂದ ಮನುಷ್ಯನ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳು ಪರಿಹಾರ ಆಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ ರೋಟರಿ ಕ್ಲಬ್ ಪುತ್ತೂರು ಯುವ ಇದರ ನಿಯೋಜಿತ ಅಧ್ಯಕ್ಷರಾದ ಡಾಕ್ಟರ್ ಚೇತನ್ ಪ್ರಕಾಶ್ ಮಾತನಾಡಿ ಯಾವುದೇ ಖರ್ಚುವೆಚ್ಚಗಳ ಇಲ್ಲದೆ ಮನೆಯಲ್ಲಿ ಯೋಗಾಸನವನ್ನು ಮಾಡಿ ಉತ್ತಮ ಆರೋಗ್ಯವನ್ನು ಪಡೆಯಬಹುದು ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಸದುಪಯೋಗ ಆಗಬೇಕೆಂದು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಪ್ರಕೃತಿ ಚಿಕಿತ್ಸಾ ಕೇಂದ್ರ ಇದರ ವೈದ್ಯರಾದ ಕುಮಾರಿ ಸಾತ್ವಿಕಾ ರವರು ಶಿಬಿರಾರ್ಥಿಗಳಿಗೆ ಜೂನ್ 5 ರಿಂದ ಜೂನ್ 21 ರವರೆಗೆ ನಡೆಯುವ ಈ ಉಚಿತ ಯೋಗ ಶಿಬಿರದಲ್ಲಿ ಕಲಿಸುವ ಯೋಗಾಸನ ಹಾಗೂ ಪ್ರಾಣಾಯಾಮದ ಬಗ್ಗೆ ವಿವರಣೆ ನೀಡಿದರು. ಶ್ರೀರಾಮ ಸೌಧ ದ ಮಾಲಕರಾದ ಉಮೇಶ್ ನಾಯಕ್ ಕಾರ್ಯಕ್ರಮ ನಿರೂಪಣೆ ಮಾಡಿದರು. ನಗರಸಭಾ ಸದಸ್ಯರಾದ ಶಶಿಕಲಾ ಹಾಗೂ ಯೋಗ ಗುರು ಚಂದ್ರಶೇಖರ್ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.