ನಿಡ್ಲೆ: ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾ ಕೂಟ

0

ನಿಡ್ಲೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಚೇರಿ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿಡ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾ ಕೂಟ ಬೆಳ್ತಂಗಡಿ ತಾಲೂಕಿನ ನಿಡ್ಲೆ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ನಿಡ್ಲೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಹೆಬ್ಬಾರ್ ಉದ್ಘಾಟಿಸಿ ಮಾತನಾಡಿದ ಅವರು ಕ್ರೀಡೆ ಎನ್ನುವಂತದು ಮುಂದಿನ ಹಂತಗಳಲ್ಲಿ ಕ್ರೀಡಾ ಮನೋಭಾವಗಳನ್ನು ಹೆಚ್ಚಿಸುವುದರ ಮುಖಾಂತರವಾಗಿ ಮಕ್ಕಳಿಗೆ ಕ್ರೀಡೆಯ ಬಗ್ಗೆ ಶೈಕ್ಷಣಿಕ ವರ್ಷದಲ್ಲಿ ಈ ಕಾರ್ಯಕ್ರಮ ಅವರ ವ್ಯಕ್ತಿತ್ವ ವನ್ನು ಹೆಚ್ಚಿಸಲು ಒಂದು ವೇದಿಕೆ ಆಗಿದೆ ಎಂದರು.

ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನಾರಾಯಣ ಎಂಕೆ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ  ಶ್ಯಾಮಲ , ಮಾಜಿ ಮುಖ್ಯ ಶಿಕ್ಷಕ ರಾಜಗುರು ಹೆಬ್ಬಾರ್,ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ನಾರಾಯಣ ಎಂಕೆ, ವಿಲ್ಫ್ರಾಡ್ ಪಿಂಟೋ,ವಲಯ ಮಟ್ಟದ ಕ್ರೀಡಾ ಸಂಯೋಜಕರಾದ ಶೀನಪ್ಪ, ಗ್ರಾಮ ಪಂಚಾಯತ್ ಸದಸ್ಯರಾದ ಮೋಹನ್ ಪೂಜಾರಿ,  ಸಿಆರ್ ಪಿ  ಶಾಲಾ ಮುಖ್ಯ ಶಿಕ್ಷಕಿ ವಸಂತಿ, ಹಾಗೂ ರಾಜಗುರು ಹೆಬ್ಬಾರ್  ಉಪಸ್ಥಿತರಿದ್ದರು.

ಕಾರ್ಯಕ್ರವನ್ನು ಮೀನಾಕ್ಷಿ ನಿರೂಪಿಸಿ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಸಂತಿ ಸ್ವಾಗತಿಸಿ, ಶಿಕ್ಷಕಿ  ರಕ್ಷಾ ಧನ್ಯವಾದಗೈದರು.

LEAVE A REPLY

Please enter your comment!
Please enter your name here