ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

0

ಬೆಳ್ತಂಗಡಿ: ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ನಾಡಗೀತೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಕಾಲೇಜಿನ ಸಂಸ್ಥಾಪಕರಾದ ತಲ್ ಹತ್ ಎಮ್ ಜಿ ಅಧ್ಯಕ್ಷತೆಯನ್ನು ವಹಿಸಿದ್ದರು.

ಈ ಸಂದರ್ಭದಲ್ಲಿ  ಕಾಲೇಜಿನ ಪ್ರಾಂಶುಪಾಲರಾದ ಮಹಮ್ಮದ್ ರಫಿ ಯವರು ಕನ್ನಡ ನಾಡು ನುಡಿಯ ಬಗ್ಗೆ ತಿಳಿಸಿಕೊಟ್ಟರು.

ಭೋಧಕ ಸಿಬ್ಬಂದಿಗಳಾದ ಸಾಧಿಕ್ ಬೆಳ್ತಂಗಡಿ, ತೋಮಸ್ ಉಜಿರೆ, ಅಕಿದಾ ನಾವೂರ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಕನ್ನಡ ರಾಜ್ಯೋತ್ಸವದ ಬಗ್ಗೆ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಪ್ರಥಮ ವರ್ಷದ ಡಿ.ಸಿ.ಎ ವಿದ್ಯಾರ್ಥಿನಿ ಸಫಾವತ್ ಸ್ವಾಗತಿಸಿ, ವಿದ್ಯಾರ್ಥಿನಿ ಮಂಸೂರ ವಂದಿಸಿದರು. ಫಾತಿಮ ಹಾಗೂ ಫರ್ಹಾನ ಕಾರ್ಯಕ್ರಮ ನಿರೂಪಿಸಿದರು.

 

LEAVE A REPLY

Please enter your comment!
Please enter your name here