ಬೆಳ್ತಂಗಡಿ : 67ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿ ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನ.1ರಂದು ವಿಜೃಂಭಣೆಯಿಂದ ನಡೆಯಿತು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನಿಸಾರ್ ಕುದ್ರಡ್ಕ ಸಭಾಧ್ಯಕ್ಷತೆ ವಹಿಸಿದ್ದರು. ಧ್ವಜಾರೋಹಣವನ್ನು ರಾಷ್ಟ್ರೀಯ ಕಾರ್ಯದರ್ಶಿ ಆಲ್ಫೋನ್ಸ್ ಫ್ರಾಂಕೋ ನೆರವೇರಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಎಸ್‌ಡಿಪಿಐ ದ.ಕ ಜಿಲ್ಲಾ ಸದಸ್ಯ ನವಾಝ್ ಶರೀಫ್ ಕಟ್ಟೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸೋ ಫ್ರಾಂಕೋ, ಎಸ್‌ಡಿಪಿಐ ದ.ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ,
ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ಅಧ್ಯಕ್ಷರಾದ ಇಸ್ಮಾಯಿಲ್ ಸಂಜಯನಗರ, ಕ್ಷೇತ್ರ ಸಮಿತಿ ಕಾರ್ಯದರ್ಶಿಗಳಾದ ಸಾದಿಕ್ ಲಾಯಿಲಾ, ಫಸಲ್ ರಹಮಾನ್ ಉಜಿರೆ, ಪಕ್ಷದ ಮುಖಂಡರಾದ ಅಬ್ದುಲ್ ಅಜೀಜ್ ಝುಹುರಿ, ಕುವೆಟ್ಟು ಬ್ಲಾಕ್ ಅಧ್ಯಕ್ಷರಾದ ಅಶ್ಫಾಕ್ ಪುಂಜಾಲಕಟ್ಟೆ, ಎಸ್.ಡಿ.ಟಿ.ಯು ಜಿಲ್ಲಾ ಕಾರ್ಯದರ್ಶಿ ಶಮೀಮ್ ಯೂಸುಫ್, ತಾಲ್ಲೂಕು ಅಧ್ಯಕ್ಷ ಸಾಲಿ ಮದ್ದಡ್ಕ, ಕಾರ್ಯದರ್ಶಿ ರಿಯಾಜ್ ಪಣಕಜೆ ಇನ್ನಿತರ ನಾಯಕರು ಉಪಸ್ಥಿತರಿದ್ದರು. ಪಕ್ಷದ ಕಾರ್ಯಕರ್ತರು ಮತ್ತು ಹಿತೈಶಿಗಳು ಭಾಗವಹಿಸಿದರು.
ನಿಝಮ್ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸಾರ್ವಜನಿಕರಿಗೆ ಸಿಹಿತಿಂಡಿ ವಿತರಿಸಲಾಯಿತು.