ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ

0

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ 67ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ರೆ|ಫಾ|ಜೆರೋಮ್ ಡಿಸೋಜರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು  ಕನ್ನಡ ಭಾಷೆ ಮಾತ್ರವಲ್ಲ ಅದು ನಮ್ಮ ಸಂಸ್ಕೃತಿ. ಕನ್ನಡ ನಾಡು ರೂಪುಗೊಳ್ಳಲು ಅನೇಕ ಮಹನೀಯರು ಶ್ರಮಿಸಿದ್ದಾರೆ. ಅವರ ನಿಸ್ವಾರ್ಥ ಸೇವೆ,ತ್ಯಾಗ ಬಲಿದಾನವನ್ನು ನೆನಪಿಸಿಕೊಳ್ಳುವ ಸುದಿನವಿಂದು. ನಾಡು – ನುಡಿಯ ಸ್ಮರಣೆ ಮಾಡಿಕೊಳ್ಳುವುದರೊಂದಿಗೆ, ಕನ್ನಡ ನಾಡು -ನುಡಿಯನ್ನು ಇನ್ನಷ್ಟು ಸಂಪದ್ಭರಿತ, ಶ್ರೀಮಂತಗೊಳಿಸುವ ಬಗ್ಗೆ ನಾವು ಗಮನಹರಿಸ ಬೇಕು ಎಂದು ಅವರು ಸಂದೇಶ ನೀಡಿದರು.ಕನ್ನಡ ನಾಡು- ನುಡಿಯ ಸಂವರ್ಧನೆಗಾಗಿ ನಾವು ಸದಾ ಸಿದ್ಧರಿರ ಬೇಕು.ಭಾಷೆಯನ್ನು ಬೆಳೆಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಅವರು ಹೇಳಿದರು.

ಪ್ರೌಢಶಾಲಾ ಮುಖ್ಯ ಶಿಕ್ಷಕರಾದ ಮೋಹನ್ ನಾಯಕ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ದೀಪ್ತಿ ಸ್ವಾಗತಿಸಿ, ಶ್ರೀಲಕ್ಷ್ಮಿ ವಂದಿಸಿ, ಶಿಕ್ಷಕಿಯರಾದ ಜೊಯ್ಲಿನ್ ಅಂದ್ರಾದೆ ರಾಜ್ಯೋತ್ಸವದ ಕುರಿತು ಮಾತನಾಡಿದರು, ಲೀನಾ ಮೋನಿಸ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here