ಮುಂದಿನ ಚುನಾವಣೆಯಲ್ಲಿ ಬೆಳ್ತಂಗಡಿಯಲ್ಲಿ ಕಾಂಗ್ರೇಸ್ ಪಕ್ಷದ ಶಾಸಕ ಆಯ್ಕೆ ಖಚಿತ – ಪಿ. ಎಂ. ಸಾಹಿದ್ ಪತ್ರಿಕಾ ಗೋಷ್ಠಿ

0


ಬೆಳ್ತಂಗಡಿ : ಮುಂದಿನ ಆರು ತಿಂಗಳಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ವಿಜಯವಾಗಿ ಶಾಸಕರಾಗಲಿದ್ದಾರೆ ಹಾಗೂ ರಾಜ್ಯದಲ್ಲಿ ಕಾಗ್ರೇಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಕೆಪಿಸಿಸಿ ಕಾರ್ಯದರ್ಶಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿ ಪಿ. ಎಂ. ಸಾಹಿದ್ ತೆಕ್ಕಿಲ್ ಹೇಳಿದರು.

ಅವರು ನ.2 ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

ಹಾಲಿ ಶಾಸಕರ ಕಾರ್ಯ ವೈಕರ್ಯದ ವಿರುದ್ಧ ಜನರು ಬದಲಾವಣೆಗೆ ಬಯಸಿದ್ದು ಕಾಗ್ರೇಸ್ ಪಕ್ಷ ತಾಲೂಕಿನ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಕಾಗ್ರೇಸ್ ಪಕ್ಷದ ಶಾಸಕರು ಇದ್ದ ಸಂದರ್ಭದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯವನ್ನು ಹಾಗೂ ಹಾಲಿ ಶಾಸಕರ ಕಮಿಷನ್, ಜನವಿರೋಧಿ ನೀತಿಯನ್ನು ತಿಳಿಸಲಾಗುವುದು. ಕಾಂಗ್ರೆಸ್ ಪಕ್ಷ ನಾಯಕ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆ ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ 3500 ಕಿ. ಮೀ. ದೂರದ ಪಾದಯಾತ್ರೆ ದೇಶದಲ್ಲಿಯೇ ಪ್ರಥಮ ಯಾತ್ರೆ ಯಾಗಿ ಮೂಡಿದೆ, ಇದರಿಂದ ಪಕ್ಷ ಸಂಘಟನೆ, ಎಲ್ಲಾ ಸಮುದಾಯದವರನ್ನು ಒಟ್ಟು ಕೂಡಿಸುವ ಕೆಲಸ ಆಗಿದೆ. ಪಕ್ಷದ ನಾಯಕರಾದ ಡಿ. ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮತ್ತು ಸ್ಥಳೀಯ ನಾಯಕರ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸಿ ಗೆಲುವು ಖಚಿತ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಬೆಳ್ತಂಗಡಿ ಬ್ಲಾಕ್ ಕಾಗ್ರೇಸ್ ನಗರ ಅಧ್ಯಕ್ಷ ಕೆ. ಶೈಲೇಶ್ ಕುಮಾರ್, ಗ್ರಾಮೀಣ ಅಧ್ಯಕ್ಷ ರಂಜನ್ ಜಿ. ಗೌಡ, ಕಾರ್ಮಿಕ ಘಟಕದ ರಾಜ್ಯ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು,, ಜಿಲ್ಲಾ ಕಾಗ್ರೇಸ್ ಮಾಜಿ ಕಾರ್ಯದರ್ಶಿ ಸದಾನಂದ ಮಾವೋಜಿ, ಯುವ ಕಾಂಗ್ರೇಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಹಿಂದುಳಿದ ವರ್ಗದ ತಾಲೂಕು ಅಧ್ಯಕ್ಷ ದಯಾನಂದ ದೇವಾಡಿಗ, ನಗರ ಬ್ಲಾಕ್ ಕಾರ್ಮಿಕ ಘಟಕ ಅಧ್ಯಕ್ಷ ಮೆಹಬೂಬ್, ಗ್ರಾಮೀಣ ಘಟಕದ ಪ್ರಧಾನ ಕಾರ್ಯದರ್ಶಿ ನೇಮಿರಾಜ್, ಬ್ಲಾಕ್ ಕಾಗ್ರೇಸ್ ನಗರ ಕಾರ್ಯದರ್ಶಿ ಅವಿನಾಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here