HomePage_Banner
HomePage_Banner
HomePage_Banner

ಕೇಂದ್ರ ಸರಕಾರದ ಆರ್ಥಿಕ ವ್ಯವಹಾರಗಳ ಸಮಿತಿಯಲ್ಲಿ ಡಿ.ವಿ.ಎಸ್

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ನರೇಂದ್ರ ಮೋದಿ ನೇತೃತ್ವದಲ್ಲಿನ ಕೇಂದ್ರ ಸರಕಾರದ ಆರ್ಥಿಕ ವ್ಯವಹಾರಗಳ ಸಮಿತಿಯಲ್ಲಿ ಸಚಿವ ಡಿ. ವಿ. ಸದಾನಂದ ಗೌಡರವರಿಗೆ ಅವಕಶ ಕಲ್ಪಿಸಲಾಗಿದೆ.

ಕೆಲವೇ ದಿನಗಳ ಹಿಂದೆ `ಆರ್ಥಿಕ ಬೆಳವಣಿಗೆ ಹಾಗೂ ಬಂಡವಾಳ ಹೂಡಿಕೆ ಸಮಿತಿ’ ಮತ್ತು ಉದ್ಯೋಗ ಹಾಗೂ ಕೌಶಾಲ್ಯಾಭಿವೃದ್ಧಿ ಸಮಿತಿ’ ಎಂಬ ಹೊಸ ಸಮಿತಿಗಳನ್ನು ರಚಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇದೀಗ ಭದ್ರತಾ ಸಮಿತಿ, ಆರ್ಥಿಕ ವ್ಯವಹಾರಗಳ ಸಮಿತಿ, ರಾಜಕೀಯ ವ್ಯವಹಾರಗಳ ಸಮಿತಿ, ಸಂಸದೀಯ ವ್ಯವಹಾರಗಳ ಸಮಿತಿ ಮತ್ತು ಸಚಿವರ ವಸತಿ ಹಂಚಿಕೆ ಸಮಿತಿಯನ್ನು ರಚಿಸಿದ್ದು ಆರ್ಥಿಕ ವ್ಯವಹಾರಗಳ ಸಮಿತಿಯಲ್ಲಿ ಪುತ್ತೂರಿನ ಮಾಜಿ ಶಾಸಕರೂ ಆಗಿರುವ ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆಯ ಸಚಿವ ಡಿ.ವಿ.ಸದಾನಂದ ಗೌಡರವರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಿದ್ದಾರೆ. ಈ ಸಮಿತಿಯಲ್ಲಿ ಸದಾನಂದ ಗೌಡರವರು ಮಾತ್ರವಲ್ಲದೆ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಹಣಕಾಸು ಖಾತೆಯ ಸಚಿವೆ ನಿರ್ಮಲಾ ಸೀತಾರಾಮನ್, ಸಾರಿಗೆ ಸಚಿವ ನಿತಿನ್ ಗಡ್ಕರಿ, ಕಾನೂನು ಸಚಿವ ರವಿಶಂಕರ್ ಪ್ರಸಾದ್ ಮತ್ತಿತರರು ಇದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.