ಬೆಳ್ತಂಗಡಿ ತಾಲೂಕು – ಮಗುವಿಗೊಂದು ಪುಸ್ತಕ ನೀಡಿ ಅಭಿಯಾನ ಆರಂಭ

0

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಬೆಳ್ತಂಗಡಿ ತಾಲೂಕು ಪ್ರೌಢಶಾಲೆ ಮತ್ತು ಸಹ ಶಿಕ್ಷಕರ ಸಂಘದವರ ನೇತೃತ್ವದಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಇವರ ಮಾರ್ಗದರ್ಶನದಲ್ಲಿ, ತಾಲೂಕಿನ ಎಲ್ಲಾ ಸರಕಾರಿ, ಖಾಸಗಿ ಅನುದಾನಿತ ಮತ್ತು ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಮಕ್ಕಳಿಗೆ ಗ್ರಂಥಾಲಯದ ಬಳಕೆ ಹಾಗೂ ಕಥೆ ಕವನ ಬರೆಯುವ, ಓದುವ ಪ್ರೇರಣಾ ಕಾರ್ಯಕ್ರಮ “ಮಗುವಿಗೊಂದು ಪುಸ್ತಕ ನೀಡಿ” ಅಭಿಯಾನ   ಉದ್ಘಾಟನೆಗೊಂಡಿತು.  ಸರಕಾರಿ ಪ್ರೌಢಶಾಲೆ ಬೆಳ್ತಂಗಡಿಯಲ್ಲಿ ಕಾರ್ಯಕ್ರಮ  ಜರುಗಿತು.

ಕಾರ್ಯಕ್ರಮವನ್ನು  ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿರೂಪಾಕ್ಷಪ್ಪ ಎಚ್ ಎಸ್ ರವರು  ದೀಪ ಬೆಳಗಿಸಿ ಉದ್ಘಾಟಿಸಿ  ಮಾತನಾಡಿದರು.ಮುಖ್ಯ ಉಪನ್ಯಾಸಕರಾಗಿ ಆಗಮಿಸಿದ ನಿವೃತ್ತ ಪ್ರಾಚಾರ್ಯರಾದ ಕೃಷ್ಣಪ್ಪ ಪೂಜಾರಿ ಬೆಳ್ತಂಗಡಿಯವರು ಉಪನ್ಯಾಸ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ ಪಿ ಶ್ರೀನಾಥರು ವಹಿಸಿದ್ದರು.

ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕುಮಾರ್ ಜೈನ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ವೆಂಕಟೇಶ್ ತುಳಪುಳೆ, ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ರಮೇಶ್ ಮಯ್ಯರವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ವತಿಯಿಂದ ಶಾಲಾ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಹಸ್ತಾಂತರಿಸಿದ್ದಲ್ಲದೆ , ಮಗುವಿಗೊಂದು ಪುಸ್ತಕವನ್ನೂ ನೀಡುವುದರ ಮೂಲಕ ಅಭಿಯಾನಕ್ಕೆ ವಿಶೇಷ ರೀತಿಯಲ್ಲಿ ಚಾಲನೆ ನೀಡಲಾಯಿತು. ಸಭೆಯಲ್ಲಿ ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳು ಮತ್ತು ಸದಸ್ಯರು ಹಾಜರಿದ್ದರು.

ಅಭಿಯಾನದ ಅಂಗವಾಗಿ ಬೆಳ್ತಂಗಡಿ ತಾಲೂಕಿನ ಎಪ್ಪತ್ತಮೂರು ಪ್ರೌಢಶಾಲೆಗಳಲ್ಲೂ ನವೆಂಬರ್ ಮಾಸದಾದ್ಯಂತ, ವಿದ್ಯಾರ್ಥಿಗಳಿಗೆ ಸಾಹಿತ್ಯಿಕ ಚಟುವಟಿಕೆಗಳನ್ನು ಆಯೋಜಿಸಲಾಗುವುದು. ಈ ಬಗ್ಗೆ ಸೂಕ್ತ ಮಾಹಿತಿ ಮತ್ತು ಸೂಚನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಾರ್ಗದರ್ಶನದಂತೆ, ಶಿಕ್ಷಕರ ಸಂಘಟನೆಗಳವರ ನೇತೃತ್ವದಲ್ಲಿ, ಎಲ್ಲಾ ಶಾಲೆಗಳಿಗೂ ನೀಡಲಾಗುವುದೆಂದು ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಿ. ಯದುಪತಿ ಗೌಡರವರು ಸ್ವಾಗತ ಭಾಷಣದಲ್ಲಿ ತಿಳಿಸಿದರು. ಬೆಳ್ತಂಗಡಿ ಸರಕಾರಿ ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದರಾದ ರಾಜೇಂದ್ರ ರವರು ಧನ್ಯವಾದ ಸಲ್ಲಿಸಿದರೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ, ಬೆಳಾಲು ಶ್ರೀ ಧ ಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರೂ ಆದ ರಾಮಕೃಷ್ಣ ಭಟ್ ಚೊಕ್ಕಾಡಿಯವರು ಕಾರ್ಯಕ್ರಮ ಸಂಯೋಜಿಸಿದರು.

LEAVE A REPLY

Please enter your comment!
Please enter your name here