ಜ್ಞಾನದೀಪದಲ್ಲಿ 12ನೇ ವರ್ಷದ ನವೋದಯ ತರಬೇತಿಗೆ ದಾಖಲಾತಿ ಆರಂಭ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
  • ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆ

ಬೆಳ್ಳಾರೆ, ಸುಳ್ಯ, ಸುಬ್ರಹ್ಮಣ್ಯ, ಉಪ್ಪಿನಂಗಡಿಯಲ್ಲಿ ತರಬೇತಿ:
ಬೆಳ್ಳಾರೆ ಮತ್ತು ಸುಳ್ಯದಲ್ಲಿ ನಡೆಯುತ್ತಿದ್ದ ತರಬೇತಿಯನ್ನು ಪ್ರಸಕ್ತ ವರ್ಷದಿಂದ ಸುಬ್ರಹ್ಮಣ್ಯ ಮತ್ತು ಉಪ್ಪಿನಂಗಡಿಯಲ್ಲೂ ನಡೆಸಲಾಗುತ್ತದೆ. 2019-20ನೇ ಸಾಲಿನಲ್ಲಿ ೫ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯ ಹಾಗೂ ಮೊರಾರ್ಜಿದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷೆ ಬರೆಯಲು ಹೆಚ್ಚಿನ ಮಾಹಿತಿ ಹಾಗೂ ಜು.7ರಿಂದ ನಡೆಯುವ ತರಬೇತಿಗೆ ದಾಖಲಾತಿ ಪಡೆಯಲು ಜ್ಞಾನದೀಪ ಸಂಸ್ಥೆಯ ಸುಳ್ಯ ಮತ್ತು ಬೆಳ್ಳಾರೆಯ ಕಛೇರಿಯನ್ನು ಸಂಪರ್ಕಿಸಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಯನ್ನು ಬರೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ 11 ಸುಳ್ಯ ಮತ್ತು ಬೆಳ್ಳಾರೆಯಲ್ಲಿ ತರಬೇತಿ ನೀಡುತ್ತಿರುವ ಹಾಗೂ 11 ವರ್ಷದಲ್ಲಿ 108 ವಿದ್ಯಾರ್ಥಿಗಳು ಜವಾಹರ್ ನವೋದಯ ವಿದ್ಯಾಲಯಕ್ಕೆ ಆಯ್ಕೆಯಾಗುವಂತೆ ತರಬೇತಿ ನೀಡಿರುವ ಸುಳ್ಯ ಮತ್ತು ಬೆಳ್ಳಾರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜ್ಞಾನದೀಪ ಶಿಕ್ಷಣ ಸಂಸ್ಥೆಯಲ್ಲಿ 12ನೇ ವರ್ಷದ ನವೋದಯ ಪ್ರವೇಶ ಪರೀಕ್ಷೆಯ ತರಬೇತಿಗೆ ದಾಖಲಾತಿ ಆರಂಭಗೊಂಡಿದೆ.

ಜವಾಹರ್ ನವೋದಯ ಪ್ರವೇಶ ಪರೀಕ್ಷೆಗೆ ತರಬೇತಿ ನೀಡುವ ಮೂಲಕ ಸಂಸ್ಥೆಯು ವಿದ್ಯಾರ್ಥಿಗಳ ಬುದ್ಧಿವಂತಿಕೆ ಹೆಚ್ಚಿಸುವ ಮಹತ್ತರವಾದ ಆಕಾಂಕ್ಷೆಯನ್ನು ಇಟ್ಟುಕೊಂಡು ನವೋದಯ ವಿದ್ಯಾಲಯ ಮಾತ್ರವಲ್ಲದೇ ಪ್ರಸಕ್ತ ವರ್ಷದಿಂದ ಮೋರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷೆಗೆ ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಪರೀಕ್ಷೆಯಲ್ಲಿ ಕೊಡಬಹುದಾದ ಪ್ರಶ್ನೆಗಳಿಗೆ ಸುಲಭವಾಗಿ ಉತ್ತರ ಕಂಡುಹಿಡಿಯುವ ಹಾಗೂ ಉತ್ತರಿಸುವ ವಿಧಾನಗಳನ್ನು ಕಲಿಸಿಕೊಡಲಾಗುತ್ತಿದೆ.

ನವೋದಯ ವಿದ್ಯಾಲಯದ ಬಗ್ಗೆ: ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಭಾರತ ಸರ್ಕಾರವು ಜವಾಹರ್ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸಿದೆ. ಜ.ನ.ವಿ ಶಿಕ್ಷಣ ವಸತಿ ಶಾಲೆಗಳಾಗಿದ್ದು, ಆಯ್ಕೆ ಪರೀಕ್ಷೆಯ ಮೂಲಕ ಆರನೆಯ ತರಗತಿಗೆ ಪ್ರವೇಶ ನೀಡಲಾಗುತ್ತಿದೆ. ಇಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವುದರೊಂದಿಗೆ ಊಟ, ವಸತಿ ಸಮವಸ್ತ್ರ ಮತ್ತು ಪಠ್ಯ ಪುಸ್ತಕಗಳನ್ನು ಕೊಡಲಾಗುತ್ತದೆ. ಪ್ರತಿಭಾವಂತ ಮಕ್ಕಳ ಸರ್ವಾಂಗಿಣ ಬೆಳವಣಿಗೆಗೆ ಉತ್ತಮ ಗುಣಮಟ್ಟದ ಆಧುನಿಕ ಶಿಕ್ಷಣವನ್ನು ಜ.ನ.ವಿ ಮೂಲಕ ಒದಗಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದ ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಜವಾಹರ್ ನವೋದಯ ವಿದ್ಯಾಲಯವು ವರದಾನವಾಗಿದೆ.
ತರಬೇತಿಯಲ್ಲೇನಿದೆ..?: ಮಾನ್ಯತೆ ಪಡೆದ ಶಾಲೆಯಲ್ಲಿ ಐದನೇ ತರಗತಿಯಲ್ಲಿ ಓದುತ್ತಿರುವ ಹಾಗೂ ಪ್ರವೇಶ ಪರೀಕ್ಷೆ ಬರೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಸುಳ್ಯದ ಶ್ರೀಹರಿ ವಾಣಿಜ್ಯ ಸಂಕೀರ್ಣ ಹಾಗೂ ಬೆಳ್ಳಾರೆಯ ದೇವಿ ಹೈಟ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಜ್ಞಾನದೀಪ ಸಂಸ್ಥೆಯಲ್ಲಿ ಪ್ರತಿ ಆದಿತ್ಯವಾರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ತರಬೇತಿ ನಡೆಸಲಾಗುತ್ತಿದೆ. ತರಬೇತಿಯಲ್ಲಿ ಪ್ರವೇಶ ಪರೀಕ್ಷೆಗೆ ಬರುವ ಬುದ್ಧಿ ಸಾಮರ್ಥ್ಯದ ಪರೀಕ್ಷೆ, ಗಣಿತ ಪರೀಕ್ಷೆ ಹಾಗೂ ಭಾಷಾ ಪರೀಕ್ಷೆಗೆ ತರಗತಿಗಳು ನಡೆಯುತ್ತದೆ. ಆಯಾ ವಿಷಯಗಳಲ್ಲಿ ಪರಿಣತಿ ಹೊಂದಿದ ನುರಿತ ಉಪನ್ಯಾಸಕರುಗಳಿಂದ ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದಲ್ಲಿ ಪ್ರತ್ಯೇಕವಾಗಿ ತರಬೇತಿ ನಡೆಯುತ್ತದೆ.
108 ವಿದ್ಯಾರ್ಥಿಗಳು ಆಯ್ಕೆ: ಜ್ಞಾನದೀಪ ಸಂಸ್ಥೆಯಿಂದ 2018-19ನೇ ಸಾಲಿನವರೆಗೆ ತರಬೇತಿ ಪಡೆದುಕೊಂಡ 108 ವಿದ್ಯಾರ್ಥಿಗಳು ಈಗಾಗಲೇ ನವೋದಯ ಶಾಲೆಗೆ ಆಯ್ಕೆಗೊಂಡು ನವೋದಯ ವಿದ್ಯಾಲಯದಲ್ಲಿ ಓದುತ್ತಿದ್ದಾರೆ.

ಸಂಸ್ಥೆಯಲ್ಲಿ ನಡೆಯುವ ನವೋದಯ ಪ್ರವೇಶ ಪರೀಕ್ಷೆಯ ತರಬೇತಿಯು ನವೋದಯ ಪರೀಕ್ಷೆಗೆ ಮಾತ್ರವಲ್ಲದೆ ಮೊರಾರ್ಜಿ, ಸೈನಿಕ ಸ್ಕೂಲ್ ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ವಿದ್ಯಾರ್ಥಿಗಳು ಸಿದ್ಧತೆ ನಡೆಸಲು ಅನುಕೂಲವಾಗುವ ದೃಷ್ಠಿಯಲ್ಲಿ ತರಗತಿಗಳನ್ನು ನಡೆಸಲಾಗುತ್ತಿದೆ.

Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.