ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

0


ಪಡಂಗಡಿ : ಪಡಂಗಡಿ ಗ್ರಾಮ ಪಂಚಾಯತು 2022-23ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ನ. 3 ರಂದು ಗಣಪತಿ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಳ್ತಂಗಡಿ ಅಕ್ಷರ ದಾಸೋಹ ಇಲಾಖೆಯ ಅಭಿವೃದ್ಧಿ ಅಧಿಕಾರಿ ತಾರಾಕೇಸರಿ ಇವರು ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಿ ಸಭೆಯನ್ನು ಮುನ್ನಡೆಸಿದರು, ಪಂಚಾಯತ್ ಉಪಾಧ್ಯಕ್ಷೆ ಕವಿತಾ ಪಂಚಾಯತ್ ಸದಸ್ಯರು, ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪಂ.ಅಭಿವೃದ್ಧಿ ಅಧಿಕಾರಿ ತಾರಾನಾಥ ನಾಯ್ಕ ಸ್ವಾಗತಿಸಿ ನಿರೂಪಿಸಿದರು. ಸಿಬ್ಬಂದಿ ದಿವ್ಯ ವರದಿ ವಾಚಿಸಿದರು, ಸಿಬ್ಬಂದಿ ಸುನಿಲ್ ಲೆಕ್ಕ ಪತ್ರ ಮಂಡಿಸಿದರು.
ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು. ಇಲಾಖೆಯ ಅಧಿಕಾರಿಗಳು ಇಲಾಖೆಯ ಮಾಹಿತಿ ನೀಡಿದರು. ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here