ಎಸ್.ಎಸ್.ಎಲ್.ಸಿ. ಮರು ಮೌಲ್ಯಮಾಪನ-ಉಪ್ಪಿನಂಗಡಿ ಇಂಡಿಯನ್ ಸ್ಕೂಲ್ ಶೇ. 100 ಫಲಿತಾಂಶ

Puttur_Advt_NewsUnder_1
Puttur_Advt_NewsUnder_1
  • ಇಸ್ಮತ್ ಬಾನುಗೆ ಡಿಸ್ಟಿಂಕ್ಷನ್
  • ಡಿಸ್ಟಿಂಕ್ಷನ್ ಸಂಖ್ಯೆ 8ಕ್ಕೆ ಏರಿಕೆ 

ಉಪ್ಪಿನಂಗಡಿ: ಕಳೆದ 2018-19ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ಉಪ್ಪಿನಂಗಡಿ ಇಂಡಿಯನ್ ಸ್ಕೂಲ್‌ನ 2 ವಿದ್ಯಾರ್ಥಿಗಳು ಅನುತ್ತೀರ್ಣರಾದ ಕಾರಣ ಮರು ಮೌಲ್ಯಮಾಪನಕ್ಕೆ ಕಳುಹಿಸಿದ್ದು ಇದೀಗ ಇಬ್ಬರು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದುವ ಮೂಲಕ ಶಾಲೆ ಶೇಕಡಾ 100 ಫಲಿತಾಂಶವನ್ನು ದಾಖಲಿಸಿದೆ ಎಂದು ಸಂಸ್ಥೆಯ ಪ್ರಾಚಾರ್ಯೆ ಸಂಶಾದ್ ಬೇಗಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾರ್ಥಿ ಇಸ್ಮತ್ ಬಾನು ಮೊದಲು ಪ್ರಕಟವಾದ ಫಲಿತಾಂಶದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದು, ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ ಅಂಕ ಲಭಿಸಿದ್ದು,ಇದೀಗ 533 ಅಂಕ ಪಡೆದು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಈ ಮೊದಲು ಪ್ರಕಟವಾದ ಫಲಿತಾಂಶದಲ್ಲಿ ಪರೀಕ್ಷೆಗೆ ಹಾಜರಾದ 48 ವಿದ್ಯಾರ್ಥಿಗಳ ಪೈಕಿ 7 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಮತ್ತು 46 ವಿದ್ಯಾರ್ಥಿಗಳು ಪ್ರಥಮ ಹಾಗೂ 1 ವಿದ್ಯಾರ್ಥಿ ಅನುತ್ತೀರ್ಣ ಹೊಂದಿದ್ದರು. ಇದೀಗ ಮರು ಮೌಲ್ಯ ಮಾಪನದ ಬಳಿಕದ ಫಲಿತಾಂಶದಂತೆ ಒಟ್ಟು 48 ವಿದ್ಯಾರ್ಥಿಗಳ ಪೈಕಿ 8 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ ಮತ್ತು 40 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಶೇಕಡಾ 100 ಫಲಿತಾಂಶ ಪಡೆದುಕೊಳ್ಳುವಂತಾಗಿದೆ ಎಂದು ಪ್ರಾಚಾರ್ಯೆ ಸಂಶಾದ್ ಬೇಗಂ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.