ಪುತ್ತೂರು: ಪುತ್ತೂರು ತಾಲೂಕಿನ ಕಬಕ ಗ್ರಾಮದ ನೆಹರುನಗರ ಶ್ರೀ ರಕ್ತೇಶ್ವರಿ ದೇವಸ್ಥಾನದ ನಿರ್ಮಾಣ ಕಾರ್ಯಕ್ಕೆ ಶ್ರೀ ಧರ್ಮಸ್ಥಳ ಧರ್ಮಾಧಿಕಾರಿಗಳು ಶ್ರೀ ವೀರೇಂದ್ರ ಹೆಗ್ಗಡೆಯವರು 3ಲಕ್ಷ ರೂ. ದೇಣಿಗೆ ನೀಡಿದ್ದು ದೇಣಿಗೆಯ ಡಿಡಿಯನ್ನು ಜಿಲ್ಲಾ ನಿರ್ದೇಶಕರಾದ ಸತೀಶ್ ಶೆಟ್ಟಿಯವರು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಮಾರ್ ಇವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಜನಾರ್ಧನ ಎ. ಕೆ, ಮೇಲ್ವಿಚಾರಕರಾದ ಪಾವನ, ಸೇವಾಪ್ರತಿನಿಧಿ ಸುನಿತಾ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ರಾಜ್ಯ ಸಲಹಾ ಸಮಿತಿ ಸದಸ್ಯರಾದ ಸಾಜ ರಾಧಾಕೃಷ್ಣ ಆಳ್ವ ಮತ್ತು ಜೀರ್ಣೋದ್ಧಾರ ಸಮಿತಿಯ ಪ್ರದಾನ ಕಾರ್ಯದರ್ಶಿ ರಾಜೇಶ್ ಬನ್ನೂರು, ಗೌರವ ಸಲಹೆಗಾರ ಅಜಿತ್ ಕುಮಾರ ಜೈನ್ ಉಪಾಧ್ಯಕ್ಷ ನವೀನ್ ನಾಯ್ಕ್, ಶಿವಪ್ಪ ನಾಯ್ಕ್, ಬಾಲಚಂದ್ರ ನಾಯ್ಕ್, ಕಾರ್ಯದರ್ಶಿ ಶ್ಯಾಮ್ ಪ್ರಸಾದ್ ಅರ್ಚಕರಾದ ಕೃಷ್ಣ ಭಟ್ ಉಪಸ್ಥಿತರಿದ್ದರು.