ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸ್ವರ್ಣದ ವತಿಯಿಂದ ವರ್ಷದ ಕಾರ್ಯಕ್ರಮವಾದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ದಂತ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವು ಸುಳ್ಯ ಕೆ.ವಿ.ಜಿ ದಂತ ಮಹಾವಿದ್ಯಾಲಯದ ಸಹಭಾಗಿತ್ವದಲ್ಲಿ ಜೂ.8ರಂದು ಹಾರಾಡಿ ಉನ್ನತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಸಮಾಜದ ಸ್ವಾಸ್ತ್ಯಕ್ಕಾಗಿ ಸಂಘ ಸಂಸ್ಥೆಗಳ ಪಾತ್ರ ಮಹತ್ವ:
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತಾ.ಪಂ ಅಧ್ಯಕ್ಷೆ ರಾಧಾಕೃಷ್ಣ ಬೋರ್ಕರ್ ಅವರು ಮಾತನಾಡಿ ಸಮಾಜ ಸೇವೆಯಿಂದ ನಮ್ಮನ್ನು ಸಮಾಜ ಗೌರವಿಸುತ್ತದೆ. ಅದೆ ರೀತಿ ಸಂಘಸಂಸ್ಥೆಗಳ ಇಂತಹ ಸೇವೆಯಿಂದ ಸಮಾಜದ ಸ್ವಾಸ್ತ್ಯ ಕಾಪಾಡಲು ಸಾಧ್ಯ ಎಂದರು.
ಆಯುಷ್ಮಾನ್ ಭಾರತ್, ಜನೌಷಧಿ
ಮೋದಿಜಿ ಅವರು ಜನರ ಪರವಾಗಿ ಜನೌಷಧಿ ಕೇಂದ್ರವನ್ನು ಸ್ಥಾಪಿಸಿದ್ದಾರೆ. ಅಲ್ಲದೇ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬಿಪಿಎಲ್ ಕಾರ್ಡುದಾರರಿಗೆ ರೂ. ೫ಲಕ್ಷದ ಚಿಕಿತ್ಸೆಯನ್ನು ಉಚಿತವಾಗಿ ನೀಡುತ್ತಿದ್ದಾರೆ. ಸರ್ವರು ಇದರ ಪ್ರಯೋಜನ ಪಡೆಯುವಂತೆ ರಾಧಾಕೃಷ್ಣ ರ್ಬೋಕರ್ ವಿನಂತಿಸಿದರು. ರೋಟರಿ ವಲಯ ೫ರಯ ಅಸಿಸ್ಟೆಂಟ್ ಗವರ್ನರ್ ಆಸ್ಕರ್ ಆನಂದ ಶಿಬಿರದ ಮಾಹಿತಿ ನೀಡಿದರು. ಕೃತಿ ಆಚಾರ್ಯ ಮಾತನಾಡಿ ಪರಿಸರದ ಕುರಿತು ಜಾಗೃತಿಯನ್ನು ಮೂಡಿಸಿದರು. ವೇದಿಕೆಯಲ್ಲಿ ಪುತ್ತೂರು ಬ್ಲಾಕ್ ಸಂಪನ್ಮೂಲ ವ್ಯಕ್ತಿ ದೇವಕಿ, ನಗರ ಸಭಾ ಸದಸ್ಯೆ ಪ್ರೇಮಲತಾ ನಂದಿಲ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಪ್ರತಿಮಾ, ಡಾ. ಭರತ್, ಪುತ್ತೂರು ರೋಟರಿ ಕ್ಲಬ್ ಸ್ವರ್ಣದ ನಿಯೋಜಿತ ಅಧ್ಯಕ್ಷ ಜಯಂತ್ ಶೆಟ್ಟಿ, ತಾಹಿರಾ ಜುಬೈರ್ ಉಪಸ್ಥಿತರಿದ್ದರು. ರೋಟರಿ ಸ್ವರ್ಣದ ಅಧ್ಯಕ್ಷ ಮನೋಹರ್ ಸ್ವಾಗತಿಸಿ, ಶಾಲಾ ಮುಖ್ಯಗುರು ಮುದರ ವಂದಿಸಿದರು. ಡಾ. ಅರವಿಂದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಪ್ರಶಾಂತ್ ಕಾರ್ಯಕ್ರಮ ನಿರೂಪಿಸಿದರು.