Home_Page_Advt
Home_Page_Advt
Home_Page_Advt

ಬೊಬ್ಬೆಕೇರಿ ಶಾಲಾ ದೈಹಿಕ ಶಿಕ್ಷಕಿ ಶರ್ಮಿಳಾರವರಿಗೆ ಬೀಳ್ಕೊಡುಗೆ

Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಬೊಬ್ಬೆಕೇರಿ ಸ.ಹಿ.ಪ್ರಾ.ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಸುಮಾರು 9ವರ್ಷಗಳ ಕಾಲ ಸೇವೆ ಸಲ್ಲಿಸಿ ಬೇರೆ ಶಾಲೆಗೆ ವರ್ಗಾವಣೆಗೊಳ್ಳುತ್ತಿರುವ ಶರ್ಮಿಳಾರವರಿಗೆ ಬೀಳ್ಕೊಡುವ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಜಯರಾಮ ಗೌಡ ನಾವೂರು ವಹಿಸಿದ್ದರು. ಕಾಣಿಯೂರು ಗ್ರಾ.ಪಂ ಉಪಾಧ್ಯಕ್ಷೆ ಕಮಲಾಕ್ಷಿ ಬೆದ್ರಂಗಳ, ಎಸ್‌ಡಿಎಂಸಿ ನಿಕಟಪೂರ್ವ ಅಧ್ಯಕ್ಷ ಸೀತಾರಾಮ ಗೌಡ ನಟ್ಟಿಹಿತ್ಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಪೈಕ, ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಾಮಣ್ಣ ಗೌಡ ಮೂಡಾಯಿಮಜಲು, ಶಾಲಾ ಮುಖ್ಯ ಗುರು ಸೋಮಪ್ಪರವರು ಶುಭಹಾರೈಸಿದರು. ಪೋಷಕರಾದ ಬೇಬಿ ಅನಿಸಿಕೆ ವ್ಯಕ್ತಪಡಿಸಿದರು. ಎಸ್‌ಡಿಎಂಸಿ ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶರ್ಮಿಳಾರವರು ಶಾಲೆಗೆ ಕೊಡುಗೆಯಾಗಿ ನೀಡಿದ ಮೇಜನ್ನು ಹಸ್ತಾಂತರಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಿಕ್ಷಕಿ ಗೀತಾ ಸ್ವಾಗತಿಸಿ, ಗೌರವ ಶಿಕ್ಷಕಿ ಶುತಿ ವಂದಿಸಿದರು. ಶಿಕ್ಷಕ ಜನಾರ್ದನರವರು ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿಯರಾದ ಗೀತಾ ನಾವೂರು, ದಿವ್ಯಾ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.