Home_Page_Advt
Home_Page_Advt
Home_Page_Advt

ಆರೆಲ್ತಡಿ ಶಾಲೆಯಲ್ಲಿ ಸ್ವಚ್ಛಮೇವ ಜಯತೇ ಕಾರ್ಯಕ್ರಮ: ಪ್ರತಿಜ್ಞಾ ವಿಧಿ ಸ್ವೀಕಾರ

Puttur_Advt_NewsUnder_1
Puttur_Advt_NewsUnder_1

ಸವಣೂರು: ಶಾಲಾ ಮಕ್ಕಳಲ್ಲಿ ಸ್ವಚ್ಛತೆಯ ಕುರಿತು ಅರಿವು ಮೂಡಿಸುವ ಮತ್ತು ಪರಿಸರ ಸಂರಕ್ಷಣೆಯ ಜಾಗೃತಿ ಬೆಳೆಸುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು 2019-20ನೇ ಸಾಲಿನಲ್ಲಿ ಹಮ್ಮಿಕೊಂಡಿರುವ ‘ಸ್ವಚ್ಛ ಮೇವ ಜಯತೇ’ ಎಂಬ ವಿನೂತನ ಕಾರ್ಯಕ್ರಮವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆರೆಲ್ತಡಿಯಲ್ಲಿ ಜೂ.6 ರಂದು ನಡೆಯಿತು.

ಸವಣೂರು ಗ್ರಾಮ ಪಂಚಾಯತ್ ಸದಸ್ಯೆ  ರಾಜೀವಿ ವಿ ಶೆಟ್ಟಿಯವರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯಗುರು ಜಗನ್ನಾಥ ಎಸ್ ರವರು ವಿದ್ಯಾರ್ಥಿಗಳಿಗೆ ಸ್ವಚ್ಛ ಪ್ರತಿಜ್ಞಾ ವಿಧಿ ಬೋಧಿಸಿದರು. ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದರ ಮೂಲಕ ಪರಿಸರ ಸಂರಕ್ಷಣೆಗೆ ಹೇಗೆ ಕೊಡುಗೆ ನೀಡಬಹುದೆಂದು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಸಲಾಯಿತು.

ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು ಭಾಗವಹಿಸಿದ್ದರು.ಗೌರವ ಶಿಕ್ಷಕಿಯರಾದ ದಯಾಮಣಿ ಮತ್ತು ಸರಿತಾ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.