HomePage_Banner
HomePage_Banner
HomePage_Banner

ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ವೆಂಕಟ್ರಮಣ ಗೌಡ ಪಡ್ಡಂಬೈಲು ನಿಧನ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸುಳ್ಯದ ಪ್ರಮುಖ ನಾಯಕರಲ್ಲೋರ್ವರಾದ ಪಡ್ಡಂಬೈಲು ವೆಂಕಟ್ರಮಣ ಗೌಡ (೮೭ ವ.) ರವರು ಜೂ. ೮ರಂದು ರಾತ್ರಿ ಕೆವಿಜಿ ಆಸ್ಪತ್ರೆಯಲ್ಲಿ ನಿಧನರಾದರು. ಇತ್ತೀಚೆಗೆ ಅಸೌಖ್ಯಕ್ಕೆ ಒಳಗಾಗಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಅದರೊಂದಿಗೆ ಆಹಾರ ಸೇವನೆಯನ್ನು ಸ್ಥಗಿತಗೊಳಿಸಿದ್ದುದರಿಂದ ನಿಶ್ಯಕ್ತರಾಗಿ ಆಸ್ಪತ್ರೆ ಸೇರಿದ್ದರು. ನ್ಯಾಯವಾದಿಯಾಗಿದ್ದ ಪಡ್ಡಂಬೈಲು ವೆಂಕಟ್ರಮಣ ಗೌಡರು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರಲ್ಲದೆ, ಕುರುಂಜಿ ವೆಂಕಟ್ರಮಣ ಗೌಡರಿಗೆ ಹೆಗಲಿಗೆ ಹೆಗಲು ಕೊಟ್ಟು ದುಡಿದು ಶಿಕ್ಷಣ ಸಂಸ್ಥೆಯ ಏಳಿಗೆಗೆ ಸಹಕರಿಸಿದ್ದರು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ನ ಕಾರ್ಯದರ್ಶಿಯಾಗಿದ್ದರು. ಕೆವಿಜಿ ಕಾನೂನು ಮಹಾವಿದ್ಯಾಲಯ ಆರಂಭಗೊಂಡಾಗ ಅದರ ಸ್ಥಾಪಕ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ್ದರು. ಒಂದೆರಡು ತಿಂಗಳ ಹಿಂದೆ ಅಸೌಖ್ಯಕ್ಕೆ ಒಳಗಾಗುವವರೆಗೂ ಅತ್ಯಂತ ಕ್ರಿಯಾಶೀಲರಾಗಿ ಸಾಮಾಜಿಕ ಕಾರ್ಯಗಳಲ್ಲಿ ಭಾಗಿಯಾಗುತ್ತಿದ್ದರು. ಮೃತರು ಪತ್ನಿ ಶ್ರೀಮತಿ ನೇತ್ರಾವತಿ ಪಡ್ಡಂಬೈಲು, ಪುತ್ರ ಅವಿನ್ ಪಡ್ಡಂಬೈಲು, ಪುತ್ರಿ ಸುವಿನಾ ಕೃಪಾಲ್, ಸೊಸೆ, ಮೊಮ್ಮಕ್ಕಳನ್ನು, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

ಜೂ.9 ರಂದು ಮಧ್ಯಾಹ್ನ ಅಂತ್ಯಕ್ರಿಯೆ: ಪಡ್ಡಂಬೈಲು ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಜೂ. ೯ರಂದು ಮಧ್ಯಾಹ್ನ ಅಜ್ಜಾವರ ಗ್ರಾಮದ ಪಡ್ಡಂಬೈಲು ಅವರ ತೋಟದಲ್ಲಿ ನೆರವೇರಿಸಲು ನಿರ್ಧರಿಸಲಾಗಿದೆ. ಮಧ್ಯಾಹ್ನ ಹನ್ನೆರಡು ಗಂಟೆಯವರೆಗೆ ಸುಳ್ಯದ ಮನೆಯಲ್ಲಿ ಅಂತಿಮ ದರ್ಶನ ಹಾಗೂ ವಿಧಿ ವಿಧಾನಗಳನ್ನು ನೆರವೇರಿಸಿ ಬಳಿಕ ಹೊರಟು ಪಡ್ಡಂಬೈಲಿಗೆ ಹೋಗಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅವರ ಪುತ್ರ ಅವಿನ್ ಪಡ್ಡಂಬೈಲು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.